ದೇಶ

ಕಾನ್ಪುರ ರೈಲು ದುರಂತ: ಸಾವಿನ ಸಂಖ್ಯೆ 142ಕ್ಕೆ ಏರಿಕೆ, 169 ಗಾಯಾಳುಗಳ ಪಟ್ಟಿ ಬಿಡುಗಡೆ!

ಉತ್ತರ ಪ್ರದೇಶದ ಕಾನ್ಪುರ ಬಳಿ ಫುಖರಾಯ ರೈಲ್ವೇ ನಿಲ್ದಾಣದಲ್ಲಿ ಬಳಿ ಭಾನುವಾರ ಸಂಭವಿಸಿದ ಭೀಕರು ರೈಲು ದುರಂತದಲ್ಲಿ ಸಾವಿಗೀಡಾದವರ ಸಂಖ್ಯೆ ಬರೊಬ್ಬರಿ 142ಕ್ಕೆ ಏರಿಕೆಯಾಗಿದ್ದು, ಈ ಪೈಕಿ 110 ಶವಗಳ ಗುರುತು ಪತ್ತೆ ಮಾಡಲಾಗಿದೆ ಎಂದು ರೈಲ್ವೇ ಇಲಾಖೆ ಮೂಲಗಳು ತಿಳಿಸಿವೆ.

ಕಾನ್ಪುರ ರೈಲು ದುರಂತ: ಸಾವಿನ ಸಂಖ್ಯೆ 142ಕ್ಕೆ ಏರಿಕೆ, 169 ಗಾಯಾಳುಗಳ ಪಟ್ಟಿ ಬಿಡುಗಡೆ!
ಫುಖರಾಯ ರೈಲ್ವೇ ನಿಲ್ದಾಣ ಸಮೀಪ ನಡೆದ ರೈಲು ದುರಂತ
Published On :

ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರ ಬಳಿ ಫುಖರಾಯ ರೈಲ್ವೇ ನಿಲ್ದಾಣದಲ್ಲಿ ಬಳಿ ಭಾನುವಾರ ಸಂಭವಿಸಿದ ಭೀಕರು ರೈಲು ದುರಂತದಲ್ಲಿ ಸಾವಿಗೀಡಾದವರ ಸಂಖ್ಯೆ ಬರೊಬ್ಬರಿ 142ಕ್ಕೆ ಏರಿಕೆಯಾಗಿದ್ದು, ಈ ಪೈಕಿ 110 ಶವಗಳ  ಗುರುತು ಪತ್ತೆ ಮಾಡಲಾಗಿದೆ ಎಂದು ರೈಲ್ವೇ ಇಲಾಖೆ ಮೂಲಗಳು ತಿಳಿಸಿವೆ.

ದುರಂತ ನಡೆದ ಫುಖರಾಯ ರೈಲ್ವೇ ನಿಲ್ದಾಣದಲ್ಲಿ ಬಳಿ ಸೋಮವಾರವೂ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು, ಅಪಘಾತಕ್ಕೀಡಾದ ಇಂದೋರ್-ಪಾಟ್ನಾ ಎಕ್ಸ್ ಪ್ರೆಸ್ ರೈಲು ಸಂಖ್ಯೆ 19321ರ ಹಳಿತಪ್ಪಿದ 14 ಬೋಗಿಗಳಲ್ಲಿ  ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ಈವರೆಗೂ 142 ಶವಗಳು ಪತ್ತೆಯಾಗಿದ್ದು, ಈ ಪೈಕಿ 110 ಶವಗಳ ಗುರುತು ಪತ್ತೆ ಮಾಡಲಾಗಿದೆ. ಅಂತೆಯೇ ಅಪಘಾತದಲ್ಲಿ ಗಾಯಾಳುಗಳಾಗಿರುವ 169 ಮಂದಿ ಪ್ರಯಾಣಿಕರ  ಪಟ್ಟಿಯನ್ನು ಕೂಡ ರೈಲ್ವೇ ಇಲಾಖೆ ಅಧಿಕಾರಿಗಳು ಬಿಡುಗಡೆ ಮಾಡಿದ್ದಾರೆ. ಇನ್ನುಳಿದವರ ಗುರುತುಪತ್ತೆ ಇನ್ನಷ್ಟೇ ನಡೆಯಬೇಕಿದೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಸೋಮವಾರ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಕಾನ್ಪುರ ಐಜಿ ಝಕಿ ಅಹ್ಮದ್ ಅವರು, 142 ಶವಗಳನ್ನು ಹೊರತೆಗೆಯಲಾಗಿದ್ದು, ಈ ಪೈಕಿ 110 ಮಂದಿಯ ಗುರುತು ಪತ್ತೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಅಂತೆಯೇ  ರೈಲ್ವೇ ಇಲಾಖೆ ಗಾಯಾಳುಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಪಟ್ಟಿಯನ್ನು ತನ್ನ ವೆಬ್ ಸೈಟಿನಲ್ಲಿ ಮತ್ತು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.