ಪ್ರಧಾನಿ ಮೋದಿ ಹುಲಿ ಮೇಲೆ ಸವಾರಿ ಮಾಡುತ್ತಿದ್ದಾರೆ: ನೋಟು ನಿಷೇಧಕ್ಕೆ ಮತ್ತೊಮ್ಮೆ ನಿತೀಶ್ ಬೆಂಬಲ
ಕಾಂಗ್ರೆಸ್ ಹಾಗೂ ಇತರ ವಿಪಕ್ಷಗಳ ಮೈತ್ರಿಯೊಂದಿಗೆ ಬಿಹಾರ ಸರ್ಕಾರವನ್ನು ನಡೆಸುತ್ತಿರುವ ನಿತೀಶ್ ಕುಮಾರ್ ಎರಡನೇ ಬಾರಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಬೆಂಬಲಿಸಿದ್ದಾರೆ.

Published On :
ನೋಟು ನಿಷೇಧದ ವಿಚಾರವಾಗಿ ಗದ್ದಲ ಉಂಟು ಮಾಡುವ ಮೂಲಕ ಸಂಸತ್ ಕಲಾಪಕ್ಕೆ ಅಡ್ಡಿ ಉಂಟು ಮಾಡುತ್ತಿದ್ದರೆ, ಇತ್ತ ಕಾಂಗ್ರೆಸ್ ಹಾಗೂ ಇತರ ವಿಪಕ್ಷಗಳ ಮೈತ್ರಿಯೊಂದಿಗೆ ಬಿಹಾರ ಸರ್ಕಾರವನ್ನು ನಡೆಸುತ್ತಿರುವ ನಿತೀಶ್ ಕುಮಾರ್ ಎರಡನೇ ಬಾರಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಬೆಂಬಲಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ನೋಟು ನಿಷೇಧದ ನಿರ್ಧಾರವನ್ನು ಹುಲಿಯ ಮೇಲಿನ ಸವಾರಿ ಎಂದು ಹೇಳಿರುವ ನಿತೀಶ್ ಕುಮಾರ್, 500, 1000 ರೂ ನೋಟುಗಳನ್ನು ನಿಷೇಧಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಹುಲಿಯ ಮೇಲೆ ಸವಾರಿ ಮಾಡುತ್ತಿದ್ದಾರೆ. ಇದರಿಂದ ಅವರ ಮೈತ್ರಿಕೂಟಕ್ಕೆ ತೊಂದರೆ ಉಂಟಾಗಬಹುದು, ಆದರೆ ಪ್ರಧಾನಿ ನರೇಂದ್ರ ಮೋದಿ ಅವರ ನಿರ್ಧಾರವನ್ನು ಜನರು ಭಾವನಾತ್ಮಕವಾಗಿ ಸ್ವೀಕರಿಸಿದ್ದಾರೆ. ಅಂತಿಮವಾಗಿ ಜನರು ಸ್ವೀಕರಿಸಿರುವುದನ್ನು ನಾವು ಗೌರವಿಸಬೇಕು ಎಂದು ಹೇಳುವ ಮೂಲಕ ನೋಟು ನಿಷೇಧದ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ನಿತೀಶ್ ಕುಮಾರ್ ಬೆಂಬಲಿಸಿದ್ದಾರೆ. ಪಕ್ಷದ ನಾಯಕರನ್ನುದ್ದೇಶಿಸಿ ಮಾತನಾಡಿರುವ ವೇಳೆ ನಿತೀಶ್ ಕುಮಾರ್ ಈ ಹೇಳಿಕೆಯನ್ನು ನೀಡಿರುವ ನಡೆ ಅಚ್ಚರಿ ಮೂಡಿಸಿದೆ.
ನ.16 ರಂದೂ ಪ್ರಧಾನಿ ನರೇಂದ್ರ ಮೋದಿ ಅವರನ್ನು ಬೆಂಬಲಿಸಿ ಹೇಳಿಕೆ ನೀಡಿದ್ದ ಸಿಎಂ ನಿತೀಶ್ ಕುಮಾರ್, ಬೇನಾಮಿ ಆಸ್ತಿಗಳ ಮೇಲೂ ಕ್ರಮ ಕೈಗೊಳ್ಳಬೇಕೆಂದು ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


