ಶೀಘ್ರದಲ್ಲೇ ಕಡಿಮೆ ಬಡ್ಡಿದರದಲ್ಲಿ ಬ್ಯಾಂಕ್ ಸಾಲ: ಪ್ರಧಾನಿ ಮೋದಿ ಭರವಸೆ
ಭಾರತೀಯ ಬ್ಯಾಂಕುಗಳಿಗೆ ಅಪಾರ ಪ್ರಮಾಣದ ಠೇವಣಿಗಳು ಹರಿದು ಬರುತ್ತಿದ್ದು, ಈ ಹಣದಿಂದಲೇ ಜನತೆಗೆ ಕಡಿಮೆ ಬಡ್ಡಿದರದಲ್ಲಿ ಬ್ಯಾಂಕ್ ಸಾಲ ದೊರೆಯುವಂತೆ ಮಾಡುತ್ತೇವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಆಗ್ರಾ: ಕಾಳಧನಿಕರು ಹಾಗೂ ನಕಲಿ ನೋಟುಗಳನ್ನು ನಿಯಂತ್ರಿಸುವ ಉದ್ದೇಶದಿಂದ ಕೈಗೊಂಡಿದ್ದ ನೋಟು ನಿಷೇಧ ಕ್ರಮದಿಂದ ಭಾರತೀಯ ಬ್ಯಾಂಕುಗಳಿಗೆ ಅಪಾರ ಪ್ರಮಾಣದ ಠೇವಣಿಗಳು ಹರಿದು ಬರುತ್ತಿದ್ದು, ಈ ಠೇವಣಿ ಹಣದಿಂದಲೇ ಜನತೆಗೆ ಕಡಿಮೆ ಬಡ್ಡಿದರದಲ್ಲಿ ಬ್ಯಾಂಕ್ ಸಾಲ ದೊರೆಯುವಂತೆ ಮಾಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಆಗ್ರಾದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ನೋಟು ನಿಷೇಧದ ಬಳಿಕ ಭಾರತೀಯ ಬ್ಯಾಂಕುಗಳಿಗೆ ಸುಮಾರು 5ಲಕ್ಷ ಕೋಟಿಗೂ ಅಧಿಕ ಹಣ ಠೇವಣಿಯಾದಿ ಸಂಗ್ರಹವಾಗಿದ್ದು, ಈ ಹಣವನ್ನು ಚಲಾವಣೆಗೆ ತಂದು ಜನಸಾಮಾನ್ಯರಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ದೊರಕಿಸಿಕೊಡಲು ವ್ಯವಸ್ಥೆ ಕಲ್ಪಿಸುವುದಾಗಿ ಅಭಯ ನೀಡಿದ್ದಾರೆ.
2022ರ ಪ್ರತೀ ಕುಟುಂಬಕ್ಕೂ ಸ್ವಂತ ಮನೆ
ಇದೇ ವೇಳೆ ಪ್ರಧಾನಮಂತ್ರಿ ಆವಾಸ್ ಯೋಜನೆಗೆ ಚಾಲನೆ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು 2022ರ ವೇಳೆಗೆ ದೇಶದ ಪ್ರತೀ ಕುಟುಂಬಕ್ಕೂ ಸೂರು ಕಲ್ಪಿಸುವ ಗುರಿ ಹೊಂದಿರುವುದಾಗಿ ಹೇಳಿದರು. 20220ರಲ್ಲಿ ಭಾರತವು 75ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮಕ್ಕೆ ಸಾಕ್ಷಿಯಾಗಲಿದ್ದು, ಈ ವೇಳೆಗೆ ದೇಶದ ಪ್ರತೀ ಕುಟುಂಬವೂ ಮನೆಯನ್ನು ಹೊಂದುವಂತಾಗಬೇಕು. ಮನೆಗಳನ್ನು ನಿರ್ಮಿಸುವ ಕುರಿತ ಯೋಜನೆಯನ್ನು ಕೇಂದ್ರ ಸರ್ಕಾರ ಕೈಗೆತ್ತಿಕೊಂಡಿದ್ದು, ಈ ಮೂಲಕ ಬಹಳಷ್ಟು ಮಂದಿಗೆ ಉದ್ಯೋಗಾವಕಾಶ ದೊರೆಯಲಿದೆ ಎಂದು ಅವರು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


