ಉಪ ಚುನಾವಣೆ: ಶಹದೋಲ್ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲುವು
ನಾಲ್ಕು ಲೋಕಸಭಾ ಹಾಗೂ ಎಂಟು ವಿಧಾಸಭಾ ಸ್ಥಾನಗಳಿಗೆ ನಡೆದ ಉಪ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು,....

Published On :
ನವದೆಹಲಿ: ನಾಲ್ಕು ಲೋಕಸಭಾ ಹಾಗೂ ಎಂಟು ವಿಧಾಸಭಾ ಸ್ಥಾನಗಳಿಗೆ ನಡೆದ ಉಪ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಮಧ್ಯಪ್ರದೇಶದ ಶಹದೋಲ್ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ.
ಉಪ ಚುನಾವಣೆ ನಡೆದಿದ್ದ ಅಸ್ಸಾಂನ ಲಖೀಮ್‌ಪುರ, ಮಧ್ಯಪ್ರದೇಶದ ಶಹದೋಲ್, ಕೂಚ್ ಬಿಹಾರ್ ಮತ್ತು ಪಶ್ಚಿಮ ಬಂಗಾಲದ ತಾಮ್‌ಲೂಕ್ ಪೈಕಿ ಶಹದೋಲ್ ಕ್ಷೇತ್ರದ ಫಲಿತಾಂಶ ಹೊರ ಬಿದ್ದಿದ್ದು, ಬಿಜೆಪಿ ಅಭ್ಯರ್ಥಿ ಗ್ಯಾನ್ ಸಿಂಗ್ ಅವರು ಗೆಲುವು ಸಾಧಿಸಿದ್ದಾರೆ. ಅಲ್ಲದೆ ಅಸ್ಸಾಂನ ಲಖೀಮ್‌ಪುರ ಅಭ್ಯರ್ಥಿ ಪ್ರಧಾನ್ ಬರುವಾ ಅವರು ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿಗಿಂತ ಮುಂದಿದ್ದಾರೆ.
ಆರು ರಾಜ್ಯ ಮತ್ತು ಒಂದು ಕೇಂದ್ರಾಡಳಿತ ಪ್ರದೇಶವನ್ನು ಒಳಗೊಂಡಂತೆ ನಾಲ್ಕು ಲೋಕಸಭಾ ಕ್ಷೇತ್ರ ಮತ್ತು ಎಂಟು ವಿಧಾನಸಭಾ ಕ್ಷೇತ್ರಗಳಿಗೆ ನ.19ರಂದು ಉಪಚುನಾವಣೆ ನಡೆದಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


