ದೇಶ

ಪ್ರಧಾನಿ ವಿರುದ್ಧ ಹತ್ಯೆ ಪ್ರಕರಣ ದಾಖಲಿಸಿ: ಕಾಂಗ್ರೆಸ್ ನಾಯಕ ಸಂಜಯ್ ನಿರುಪಮ್

ಕಾಂಗ್ರೆಸ್ ಮುಖಂಡ ಸಂಜಯ್ ನಿರುಪಮ್ ಪ್ರಧಾನಿ ಅವರ ವಿರುದ್ಧ ಹತ್ಯೆ ಪ್ರಕರಣ ದಾಖಲಿಸಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.

ಪ್ರಧಾನಿ ವಿರುದ್ಧ ಹತ್ಯೆ ಪ್ರಕರಣ ದಾಖಲಿಸಿ: ಕಾಂಗ್ರೆಸ್ ನಾಯಕ ಸಂಜಯ್ ನಿರುಪಮ್
ಸಂಜಯ್ ನಿರುಪಮ್
Published On :
ಮುಂಬೈ: ನೋಟುಗಳನ್ನು ಬದಲಿಸಿಕೊಳ್ಳಲು ಬ್ಯಾಂಕ್ ನಲ್ಲಿ ಕ್ಯೂ ನಿಂತಿದ್ದ ವೇಳೆ 70 ಜನರು ಮೃತಪಟ್ಟಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಣೆಗಾರರನ್ನಾಗಿ ಮಾಡಿರುವ ಕಾಂಗ್ರೆಸ್ ಮುಖಂಡ ಸಂಜಯ್ ನಿರುಪಮ್ ಪ್ರಧಾನಿ ಅವರ ವಿರುದ್ಧ ಹತ್ಯೆ ಪ್ರಕರಣ ದಾಖಲಿಸಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. 
500, 1000 ರೂ ನೋಟುಗಳ ನಿಷೇಧದಿಂದ ಸವಿರಾರು ಜನರು ಇಂದು ಆಹಾರ, ಔಷಧಗಳನ್ನು ಕೊಳ್ಳಲು ಸಾಧ್ಯವಗದೇ ಬೀದಿಯಲ್ಲಿ ನಿಂತಿದ್ದಾರೆ. ಹಲವು ದಿನಗಳ ವರೆಗೆ ಜನರು ಕ್ಯೂ ನಿಂತುಕೊಂಡಿದ್ದು ಈ ಪೈಕಿ ಒಟ್ಟು 70 ಜನರು ಮೃತಪಟ್ಟಿದ್ದಾರೆ ಎಂದು ನಿರುಪಮ್ ಹೇಳಿದ್ದಾರೆ.  ಈ ಎಲ್ಲಾ ಸಾವಿಗೂ ಒಬ್ಬರೇ ಕಾರಣವಾಗಿದ್ದು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಐಪಿಸಿ ಸೆಕ್ಷನ್ 302 ಪ್ರಕಾರ ಹತ್ಯೆ ಪ್ರಕರಣ ದಾಖಲಿಸಬೇಕು ಎಂದು ಸಂಜಯ್ ನಿರುಪಮ್ ತಿಳಿಸಿದ್ದಾರೆ. 
ಮುಂಬೈ ಕಾಂಗ್ರೆಸ್ ನ ಮುಖ್ಯಸ್ಥರಾಗಿರುವ ಸಂಜಯ್ ನಿರುಪಮ್ ನೋಟ್ ಪೇ ಚರ್ಚಾ ಕಾರ್ಯಕ್ರಮದಲ್ಲಿ ಮಾತನಾಡಿದ ವೇಳೆ ಈ ಹೇಳಿಕೆ ನೀಡಿದ್ದು, ಈ ವರೆಗೂ 5 ಲಕ್ಷ ಕೋಟಿ ರೂ ಮೊತ್ತದ ಹಳೆಯ ನೋಟುಗಳು ಬ್ಯಾಂಕ್ ಗಳಲ್ಲಿ ಜಮಾ ಆಗಿದೆ, ಆದರೆ ಜಮಾ ಆಗಿರುವ ಹಣದ ಮೊತ್ತದಲ್ಲಿ ಶೇ.25 ರಷ್ಟನ್ನು ಮಾತ್ರ ವಿತ್ ಡ್ರಾ ಮಾಡಲು ಸಾಧ್ಯವಾಗಿದ್ದು ಜನರು ಗಾಬರಿಯಾಗುವಂತಹ ಸ್ಥಿತಿ ನಿರ್ಮಾಣವಾಗಿದೆ ಎಂದು ಸಂಜಯ್ ನಿರುಪಮ್ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.