ದೇಶ

ನೋಟ್ ನಿಷೇಧ ಅಂತ್ಯವಲ್ಲ, ಕಪ್ಪು ಹಣದ ವಿರುದ್ಧ ಹೋರಾಟ ಈಗ ಆರಂಭವಾಗಿದೆ: ಮೋದಿ

ನೋಟ್ ನಿಷೇಧ ಅಂತ್ಯವಲ್ಲ. ಕಪ್ಪು ಹಣ ಮತ್ತು ಭ್ರಷ್ಟಾಚಾರದ ವಿರುದ್ಧದ ನಿಜವಾದ ಹೋರಾಟ ಈಗ ಆರಂಭವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ...

ನೋಟ್ ನಿಷೇಧ ಅಂತ್ಯವಲ್ಲ, ಕಪ್ಪು ಹಣದ ವಿರುದ್ಧ ಹೋರಾಟ ಈಗ ಆರಂಭವಾಗಿದೆ: ಮೋದಿ
ನರೇಂದ್ರ ಮೋದಿ
Published On :
ನವದೆಹಲಿ: ನೋಟ್ ನಿಷೇಧ ಅಂತ್ಯವಲ್ಲ. ಕಪ್ಪು ಹಣ ಮತ್ತು ಭ್ರಷ್ಟಾಚಾರದ ವಿರುದ್ಧದ ನಿಜವಾದ ಹೋರಾಟ ಈಗ ಆರಂಭವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಕಪ್ಪು ಕುಳಗಳಿಗೆ ಎಚ್ಚರಿಕೆ ನೀಡಿದ್ದಾರೆ.
ಇಂದು ಬಿಜೆಪಿ ಸಂಸದೀಯ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ ಅವರು, ಕಪ್ಪು ಹಣದ ವಿರುದ್ಧ 500 ಹಾಗೂ 1000 ರುಪಾಯಿ ನೋಟ್ ನಿಷೇಧ ಕಡೆ ಅಸ್ತ್ರವಲ್ಲ. ಆರಂಭವಷ್ಟೆ. ಕಪ್ಪು ಹಣ, ನಕಲಿ ನೋಟ್ ಹಾಗೂ ಭ್ರಷ್ಟಾಚಾರದಿಂದಾಗಿ ಬಡವರು, ಕೆಳ ಮತ್ತು ಮಧ್ಯಮ ವರ್ಗದ ಜನ ನೋವು ಅನುಭವಿಸುತ್ತಿದ್ದಾರೆ ಎಂದರು.
ಇದೇ ವೇಳೆ ನೋಟ್ ನಿಷೇಧವನ್ನು ವಿರೋಧಿಸುತ್ತಿರುವ ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ, ಕೆಲವರು ಕಪ್ಪು ಹಣದ ಪರ ಬಹಿರಂಗವಾಗಿ ಬೆಂಬಲಕ್ಕೆ ನಿಂತಿದ್ದಾರೆ ಎಂದರು.
500 ಹಾಗೂ 1000 ರುಪಾಯಿ ನೋಟ್ ನಿಷೇಧಿಸುವ ಮೂಲಕ ಕಪ್ಪು ಹಣ, ಭ್ರಷ್ಟಾಚಾರ ಹಾಗೂ ನಕಲಿ ನೋಟ್ ವಿರುದ್ಧ ಸಮರ ಸಾರಿದ ಪ್ರಧಾನಿಗೆ ಅಭಿನಂದನೆ ಸಲ್ಲಿಸಲು ಬಿಜೆಪಿ ಸಂಸದೀಯ ಸಭೆಯಲ್ಲಿ ಅವಿರೋಧ ನಿರ್ಣಯ ಕೈಗೊಳ್ಳಲಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.