ಮಧ್ಯಪ್ರದೇಶ ಮಾಜಿ ರಾಜ್ಯಪಾಲ ರಾಮ್ ನರೇಶ್ ಯಾದವ್ ನಿಧನ
ದೀರ್ಘಾವಧಿ ಅನಾರೋಗ್ಯದಿಂದ ಬಳಲುತ್ತಿದ್ದ ಮಧ್ಯಪ್ರದೇಶದ ಮಾಜಿ ರಾಜ್ಯಪಾಲ ರಾಮ್ ನರೇಶ್ ಯಾದವ್ ಅವರು ನಿಧನರಾಗಿದ್ದಾರೆ...

Published On :
ಭೋಪಾಲ್: ದೀರ್ಘಾವಧಿ ಅನಾರೋಗ್ಯದಿಂದ ಬಳಲುತ್ತಿದ್ದ ಮಧ್ಯಪ್ರದೇಶದ ಮಾಜಿ ರಾಜ್ಯಪಾಲ ರಾಮ್ ನರೇಶ್ ಯಾದವ್ ಅವರು ನಿಧನರಾಗಿದ್ದಾರೆ.
90 ವರ್ಷ ವಯಸ್ಸಿನ ರಾಮ್ ನರೇಶ್ ಯಾದವ್ ಅವರು ಲಖನೌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.
ರಾಮ್ ನರೇಶ್ ಯಾದವ್ ಅವರ ನಿಧನಕ್ಕೆ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಸಾರ್ವಜನಿಕ ಸಂಬಂಧಗಳು ಮತ್ತು ಜಲ ಸಂಪನ್ಮೂಲ ಸಚಿವ ನರೋತ್ತಮ್ ಮಿಶ್ರಾ ವಿಶಾದ ವ್ಯಕ್ತಪಡಿಸಿದ್ದಾರೆ.
ರಾಮ್ ನರೇಶ್ ಅವರು 2011ರ ಆಗಸ್ಟ್ 26ರಿಂದ 2016ರ ಸೆಪ್ಟೆಂಬರ್ 7ರವರೆಗೂ ಮಧ್ಯಪ್ರದೇಶದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದಾರೆ. ಇನ್ನು 1977-79ರವರೆಗೂ ಕಾಂಗ್ರೆಸ್ ಪಕ್ಷದಿಂದ ರಾಮ್ ನರೇಶ್ ಉತ್ತರಪ್ರದೇಶದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


