ಪುದುಚೆರಿ ಉಪಚುನಾವಣೆ: ಸಿಎಂ ವಿ ನಾರಾಯಣಸ್ವಾಮಿ ಗೆ 11,151 ಮತಗಳ ಗೆಲುವು
ನೆಲ್ಲಿತೋಪೆ ವಿಧಾನಸಭೆ ಉಪ ಚುನಾವಣೆಯಲ್ಲಿ ಪುದುಚೆರಿ ಮುಖ್ಯಮಂತ್ರಿ ವಿ. ನಾರಾಯಣ ಸ್ವಾಮಿ 11,151 ಮತಗಳಿಂದ ಜಯಗಳಿಸಿದ್ದಾರೆ...

ಪುದುಚೆರಿ: ನೆಲ್ಲಿತೋಪೆ ವಿಧಾನಸಭೆ ಉಪ ಚುನಾವಣೆಯಲ್ಲಿ ಪುದುಚೆರಿ ಮುಖ್ಯಮಂತ್ರಿ ವಿ. ನಾರಾಯಣ ಸ್ವಾಮಿ 11,151 ಮತಗಳಿಂದ ಜಯಗಳಿಸಿದ್ದಾರೆ.
ತಮ್ಮ ಪ್ರತಿಸ್ಪರ್ಧಿ ಎಐಎಡಿಎಂಕೆಯ ಓಂ ಶಕ್ತಿ ಶೇಖರ್ ಅವರನ್ನು ಸೋಲಿಸುವುದರ ಮೂಲಕ ಕೇಂದ್ರಾಡಳಿತ ಪ್ರದೇಶವಾದ ಪುದುಚೆರಿ ಮುಖ್ಯಮಂತ್ರಿಯಾಗಿ ಮುಂದುವರಿಯಯಲಿದ್ದಾರೆ.
ಚುನಾಯಿತ ಪ್ರತಿನಿಧಿಯಲ್ಲದ ನಾರಾಯಣಸ್ವಾಮಿ ಜೂನ್ 6 ರಂದು ಸಿಎಂ ಆಗಿ ಅಧಿಕಾರ ಸ್ವೀಕರಿಸಿದ್ದರು. ಅಧಿಕಾರ ಸ್ವೀಕರಿಸಿದ ಆರು ತಿಂಗಳೊಳಗೆ ಪುದುಚೆರಿಯ ಯಾವುದೇ ವಿಧಾನಸಭೆ ಕ್ಷೇತ್ರದಿಂದ ಚುನಾವಣೆಯಲ್ಲಿ ಆರಿಸಿ ಬರಬೇಕಾಗಿತ್ತು.
ಒಟ್ಟು ಚಲಾವಣೆಯಾದ 26564 ಮತಗಳಲ್ಲಿ ನಾರಾಯಣಸ್ವಾಮಿ 18,709 ಮತ ಪಡೆದಿದ್ದಾರೆ. ತಮ್ಮ ಪ್ರತಿಸ್ಫರ್ಧಿ ಓಂ ಶಕ್ತಿ ಶೇಖರ್ 7565 ಮತಗಳನ್ನು ಪಡೆದಿದ್ದಾರೆ. ಕಳೆದ ವಿಧಾನ ಸಭೆ ಚುನಾವಣೆಯಲ್ಲಿ ನಾರಾಯಣಸ್ವಾಮಿ ಭಾರಿ ಮತಗಳ ಅಂತರದಿಂದ ಜಯಗಳಿಸಿದ್ದರು, ಆದರೆ ಈ ಬಾರಿ ಚುನಾವಣೆಯಲ್ಲಿ ಮತಗಳ ಅಂತರ ಕುಸಿದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


