ಯೋಧನ ಶಿರಚ್ಛೇದ ಪ್ರಕರಣ: ಪಾಕ್ ದಾಳಿಗೆ ಭಾರತೀಯ ಸೇನೆಯಿಂದ ದಿಟ್ಟ ಉತ್ತರ
ಭಾರತೀಯ ಯೋಧನ ಶಿರಚ್ಛೇದ ಮಾಡುವ ಮೂಲಕ ಕುಕೃತ್ಯವೆಸಗಿದ್ದ ಪಾಕಿಸ್ತಾನ, ಮತ್ತೆ ಗಡಿಯಲ್ಲಿ ತನ್ನ ಪುಂಡಾಟವನ್ನು ಮುಂದುವರೆಸಿರುವ ಹಿನ್ನೆಲೆಯಲ್ಲಿ ಭಾರತೀಯ ಸೇನೆ ದಿಟ್ಟ ಉತ್ತರವನ್ನು...

ಶ್ರೀನಗರ: ಭಾರತೀಯ ಯೋಧನ ಶಿರಚ್ಛೇದ ಮಾಡುವ ಮೂಲಕ ಕುಕೃತ್ಯವೆಸಗಿದ್ದ ಪಾಕಿಸ್ತಾನ, ಮತ್ತೆ ಗಡಿಯಲ್ಲಿ ತನ್ನ ಪುಂಡಾಟವನ್ನು ಮುಂದುವರೆಸಿರುವ ಹಿನ್ನೆಲೆಯಲ್ಲಿ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡುತ್ತಿದೆ.
ನಿನ್ನೆಯಷ್ಟೇ ಮೂವರು ಭಾರತೀಯ ಯೋಧರನ್ನು ಪಾಕಿಸ್ತಾನ ಸೇನೆ ಹತ್ಯೆ ಮಾಡಿತ್ತು. ಮೂವರ ಪೈಕಿ ಓರ್ವ ಯೋಧನ ಶಿರಚ್ಛೇದ ಮಾಡುವ ಮೂಲಕ ತನ್ನ ನೀಚ ಬುದ್ಧಿಯನ್ನು ಪ್ರದರ್ಶಿಸಿತ್ತು. ಇದರ ಬೆನ್ನಲ್ಲೇ ಇಂದು ಬೆಳಿಗ್ಗೆ ಕೂಡ ಅಪ್ರಚೋದಿತ ಗುಂಡಿನ ದಾಳಿ ನಡೆಸಿ ಕದನ ವಿರಾಮವನ್ನು ಉಲ್ಲಂಘಿಸಿತ್ತು.
ಜಮ್ಮು ಮತ್ತು ಕಾಶ್ಮೀರದ ಭಿಂಬೇರ್ ಗಾಲಿ, ಕೃಷ್ಣ ಘಾಟಿ ಮತ್ತು ನೌಶಿರಾ ಸೆಕ್ಟರ್ ಬಳಿ ಪಾಕಿಸ್ತಾನ ಸೇನೆ ಮತ್ತೆ ಕದನ ವಿರಾಮವನ್ನು ಉಲ್ಲಂಘನೆ ಮಾಡುವ ಮೂಲಕ ತನ್ನ ಪುಂಡಾಟವನ್ನು ಮುಂದುವರೆಸಿತ್ತು. ಈ ಹಿನ್ನೆಲೆಯಲ್ಲಿ ಪಾಕಿಸ್ತಾನ ಸೇನಾ ಕ್ಯಾಂಪ್ ಗಳ ಮೇಲೆ ಭಾರತೀಯ ಸೇನೆ ದಾಳಿ ಮಾಡುತ್ತಿದೆ ಎಂದು ಹೇಳಲಾಗುತ್ತಿದೆ.
ಇಂದು ಬೆಳಿಗ್ಗೆ 9 ಗಂಟೆಯಿಂದ ಅಂತರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನಕ್ಕೆ ಸೇನಾ ಕುಕೃತ್ಯಕ್ಕೆ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡುತ್ತಿದೆ ಎಂದು ತಿಳಿದುಬಂದಿದೆ.
ಈ ಕುರಿತಂತೆ ಭಾರತೀಯ ಸೇನೆ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿದ್ದು, ಯೋಧನ ಶಿರಚ್ಛೇದ ಮಾಡಿದ ಒಂದು ದಿನ ಕಳೆದಿದ್ದು, ಭಿಂಬೇರ್ ಗಾಲಿ, ಕೃಷ್ಣ ಘಾಟಿ ಮತ್ತು ನೌಶಿರಾ ಸೆಕ್ಟರ್ ಬಳಿ ಪಾಕಿಸ್ತಾನ ಸೇನೆ ಕದನ ವಿರಾಮವನ್ನು ಉಲ್ಲಂಘನೆ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಪಾಕಿಸ್ತಾನ ಸೇನೆಯ ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡುತ್ತಿದೆ ಎಂದು ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


