ಲೋಕಸಭೆಯಲ್ಲಿ ನೋಟು ನಿಷೇಧ ಗದ್ದಲ: ಕಲಾಪ ನಾಳೆಗೆ ಮುಂದೂಡಿಕೆ
ರು, 500 ಹಾಗೂ ರು.1,000 ಮುಖಬೆಲೆಯ ದುಬಾರಿ ನೋಟುಗಳ ನಿಷೇಧ ಹೇರಿದ್ದ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ತಮ್ಮ ಪ್ರತಿಭಟನೆಯನ್ನು ತೀವ್ರಗೊಳಿಸಿದ್ದ ಹಿನ್ನಲೆಯಲ್ಲಿ, ವಿರೋಧ ಪಕ್ಷಗಳ ಒತ್ತಡಕ್ಕೆ ಮಣಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೊನೆಗೂ ಕಲಾಪಕ್ಕೆ...

ನವದೆಹಲಿ: ರು, 500 ಹಾಗೂ ರು.1,000 ಮುಖಬೆಲೆಯ ದುಬಾರಿ ನೋಟುಗಳ ನಿಷೇಧ ಹೇರಿದ್ದ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ತಮ್ಮ ಪ್ರತಿಭಟನೆಯನ್ನು ತೀವ್ರಗೊಳಿಸಿದ್ದ ಹಿನ್ನಲೆಯಲ್ಲಿ, ವಿರೋಧ ಪಕ್ಷಗಳ ಒತ್ತಡಕ್ಕೆ ಮಣಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೊನೆಗೂ ಕಲಾಪಕ್ಕೆ ಹಾಜರಾಗಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನೋಟು ನಿಷೇಧ ನಿರ್ಧಾರ ಕುರಿತಂತೆ ಉತ್ತರ ನೀಡಬೇಕಿದ್ದು, ಕೂಡಲೇ ಕಲಾಪಕ್ಕೆ ಹಾಜರಾಗಬೇಕೆಂದು ಆಗ್ರಹಿಸಿ, ಇಂದು 13 ಪ್ರತಿಪಕ್ಷಗಳು ಕೈಜೋಡಿಸಿ ಸಂಸತ್ತಿನ ಮುಂದಿರುವ ಗಾಂಧೀಜಿಯವರ ಪ್ರತಿಮೆ ಬಳಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆಗಿಳಿದಿದ್ದವು.
ಅಲ್ಲದೆ, ಲೋಕಸಭೆಯಲ್ಲಿ ನೋಟು ನಿಷೇಧ ಕುರಿತಂತೆ ವಿರೋಧ ವ್ಯಕ್ತಪಡಿಸಿ ಕಲಾಪಕ್ಕೆ ತೀವ್ರ ಗದ್ದಲವನ್ನುಂಟು ಮಾಡಿತ್ತು. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಯವರು ಲೋಕಸಭೆಗೆ ಹಾಜರಾಗಿದರು. ಆದರೆ, ಒಂದು ಮಾತನ್ನು ಆಡದೆ ಮೌನವನ್ನು ಮುಂದುವರೆಸಿದ್ದರು.
ಇದಕ್ಕೆ ವಿರೋಧ ವ್ಯಕ್ಪಡಿಸಿದ ರಾಹುಲ್ ಗಾಂಧಿಯವರು, ಕಲಾಪದಲ್ಲಿ ಪ್ರಧಾನಿ ಮೋದಿಯವರು ಉಪಸ್ಥಿತಿ ಇದ್ದರೆ, ಸಾಲದು, ಈ ಬಗ್ಗೆ ಹೇಳಿಕೆಯನ್ನು ನೀಡಬೇಕೆಂದು ಪಟ್ಟು ಹಿಡಿದರು, ಮೋದಿಯವರು ಸಂಸತ್ತಿನಲ್ಲಿ ಯಾವ ಕಾರಣಕ್ಕೆ ಮಾತನಾಡುತ್ತಿಲ್ಲ? ಯಾವ ಕಾರಣಕ್ಕೆ ಏಕಮುಖಿಯಾಗಿ ನಿರ್ಧಾರವನ್ನು ತೆಗೆದುಕೊಂಡರು? ನೋಟಿನ ಮೇಲೆ ನಿಷೇಧ ಹೇರಿರುವುದರಿಂದ ಜನ ಸಾಮಾನ್ಯರಿಗೆ ಸಮಸ್ಯೆ ಎದುರಾಗಿದೆ. ಶ್ರೀಮಂತರು ಯಾರೂ ಸಾಲಿನಲ್ಲಿ ನಿಂತುಕೊಂಡಿದ್ದಾರಾ? ಎಂದು ಮೋದಿ ವಿರುದ್ಧ ವಿಪಕ್ಷಗಳು ವಾಗ್ದಾಳಿ ನಡೆಸಿದವು.
ನೋಟು ನಿಷೇಧ ಕುರಿತಂತೆ ಕಲಾಪದಲ್ಲಿ ತೀವ್ರ ಗದ್ದಲ ಉಂಟಾದ ಹಿನ್ನಲೆಯಲ್ಲಿ ಲೋಕಸಭೆ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ವಿಪಕ್ಷಗಳ ಮುಖಂಡರ ಜೊತೆ ಸಭೆ ನಡೆಸಿ ಸುಗಮ ಕಲಾಪಕ್ಕೆ ಅವಕಾಶ ಮಾಡಿಕೊಡಬೇಕೆಂದು ಮನವಿ ಮಾಡಿದರು.
ಮನವಿ ಬಳಿಕವೂ ವಿರೋಧ ಪಕ್ಷಗಳು ನೋಟು ನಿಷೇಧ ಕುರಿತಂತೆ ಕಲಾಪದಲ್ಲಿ ಮತ್ತೆ ಗದ್ದಲವನ್ನುಂಟು ಮಾಡಿದರು. ಈ ಹಿನ್ನಲೆಯಲ್ಲಿ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ಕಲಾಪವನ್ನು ನಾಳೆಗೆ ಮುಂದೂಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


