ರಿಲಯನ್ಸ್ ಪೆಟ್ರೋಲ್ ಸಂಸ್ಕರಣಾ ಘಟಕದಲ್ಲಿ ಅಗ್ನಿ ದುರಂತ; 2 ಸಾವು, 8 ಮಂದಿಗೆ ಗಾಯ
ಗುಜರಾತ್ ನಲ್ಲಿರುವ ರಿಲಯನ್ಸ್ ಪೆಟ್ರೋಲ್ ಸಂಸ್ಕರಾಣ ಘಟಕದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಇಬ್ಬರು ಸಾವನ್ನಪ್ಪಿದ್ದು, 8 ಮಂದಿ ಗಾಯಗೊಂಡಿರುವ ಘಟನೆ ಸಂಭವಿಸಿದೆ.

ಅಹ್ಮದಾಬಾದ್: ಗುಜರಾತ್ ನಲ್ಲಿರುವ ರಿಲಯನ್ಸ್ ಪೆಟ್ರೋಲ್ ಸಂಸ್ಕರಾಣ ಘಟಕದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಇಬ್ಬರು ಸಾವನ್ನಪ್ಪಿದ್ದು, 8 ಮಂದಿ ಗಾಯಗೊಂಡಿರುವ ಘಟನೆ ಸಂಭವಿಸಿದೆ.
ರಿಲಯನ್ಸ್ ಪೆಟ್ರೋಲ್ ಸಂಸ್ಕರಣಾ ಘಟಕ ಗುಜರಾತ್ ಜಾಮ್ ನಗರದಲ್ಲಿದ್ದು, ವಿಚಾರ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕದಳ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ದುರಂತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲವಾದರೂ, ಎಫ್ ಸಿಸಿಯು (fluid catalytic cracking unit) ಘಟಕದಲ್ಲಿ ಗುರುವಾರ ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದ್ದು, ಗ್ಯಾಸ್ ಲೈನ್ ಗೂ ಬೆಂಕಿ ತಗುಲಿದೆ. ಇದೇ ಗ್ಯಾಸ್ ಲೈನ್ ಮೂಲಕ ಪ್ರತಿ ನಿತ್ಯ ಸುಮಾರು 660,000 ಬ್ಯಾರೆಲ್ ತೈಲ ರವಾನೆಯಾಗುತ್ತಿತ್ತು ಎಂದು ತಿಳಿದುಬಂದಿದೆ.
ಇತ್ತೀಚೆಗಷ್ಟೇ ಈ ಗ್ಯಾಸ್ ಲೈನ್ ನಲ್ಲಿ ತಾಂತ್ರಿಕ ಸಮಸ್ಯೆ ಕಂಡುಬಂದ ಹಿನ್ನಲೆಯಲ್ಲಿ ಇಲ್ಲಿ ದುರಸ್ತಿ ಕಾರ್ಯ ನಡೆಯುತ್ತಿತ್ತು. ಆದರೆ ಅಷ್ಟರಲ್ಲಾಗಲೇ ದುರಂತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಉಧ್ಯಮಿ ಮುಖೇಶ್ ಅಂಬಾನಿ ಮಾಲೀಕತ್ವ ಎರಡು ಪೆಟ್ರೋಲ್ ಸಂಸ್ಕರಣಾ ಘಟಕಗಳು ಜಾಮ್ ನಗರದಲ್ಲಿದ್ದು, ಎರಡನೇ ಸಂಸ್ಕರಣಾ ಘಟಕದಲ್ಲಿ ಪ್ರತಿನಿತ್ಯ 540,000 ಬ್ಯಾರೆಲ್ ತೈಲವನ್ನು ಉತ್ಪಾದನೆ ಮಾಡಲಾಗುತ್ತಿತ್ತು ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


