ದೇಶ

ಡಿ.1ರವರೆಗೂ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಫೀ ಇಲ್ಲ

500 ಹಾಗೂ 1000 ರುಪಾಯಿ ನೋಟ್ ನಿಷೇಧಿಸಿರುವ ಹಿನ್ನೆಲೆಯಲ್ಲಿ ನವೆಂಬರ್ 24ರ ಮಧ್ಯರಾತ್ರಿಯವರೆಗೆ ದೇಶಾದ್ಯಂತ ಎಲ್ಲಾ ರಾಷ್ಟ್ರೀಯ...

ಡಿ.1ರವರೆಗೂ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಫೀ ಇಲ್ಲ
ಸಾಂದರ್ಭಿಕ ಚಿತ್ರ
Published On :
ನವದೆಹಲಿ: 500 ಹಾಗೂ 1000 ರುಪಾಯಿ ನೋಟ್ ನಿಷೇಧಿಸಿರುವ ಹಿನ್ನೆಲೆಯಲ್ಲಿ ನವೆಂಬರ್ 24ರ ಮಧ್ಯರಾತ್ರಿಯವರೆಗೆ ದೇಶಾದ್ಯಂತ ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹಿಸುವುದನ್ನು ರದ್ದುಗೊಳಿಸಿದ್ದ ಕೇಂದ್ರ ಸರ್ಕಾರ ಇದೀಗ ಅದನ್ನು ಡಿಸೆಂಬರ್ 1ರ ಮಧ್ಯರಾತ್ರಿಯವರೆಗೆ ವಿಸ್ತರಿಸಿದೆ. 
ಸುಗಮ ಸಂಚಾರಕ್ಕಾಗಿ ನವೆಂಬರ್ 24ರವರೆಗೆ ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ರದ್ದುಗೊಳಿಸಲಾಗಿತ್ತು. ಆದರೆ ಬ್ಯಾಂಕ್ ಗಳಿಂದ ಹಣ ವಿನಿಮಯ ಮಾಡಿಕೊಳ್ಳಲು ಮತ್ತು ಎಟಿಎಂನಿಂದ ನಗದು ಪಡೆಯಲು ಜನ ಇನ್ನೂ ಪರದಾಡುತ್ತಿರುವ ಹಿನ್ನೆಲೆಯಲ್ಲಿ ಅದನ್ನು ಡಿಸೆಂಬರ್ 1ರ ಮಧ್ಯರಾತ್ರಿಯವರೆಗೆ ವಿಸ್ತರಿಸಲಾಗಿದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಖಾತೆ ರಾಜ್ಯ ಸಚಿವ ಮನ್ಸುಖ್ ಮಂಡವಿಯಾ ಅವರು ಇಂದು ಟ್ವೀಟ್ ಮಾಡಿದ್ದಾರೆ.
ಇನ್ನೂ ಡಿ. 2ರಿಂದ ಡಿ.15ರ ಮಧ್ಯರಾತ್ರಿ ವರೆಗೆ ನಿಷೇಧಿತ 500 ಹಾಗೂ 1000 ರುಪಾಯಿ ಮುಖಬೆಲೆಯ ನೋಟುಗಳನ್ನು ಟೋಲ್‌ಗಳಲ್ಲಿ ನೀಡಿ ಶುಲ್ಕ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ. ಅಲ್ಲದೆ ಶುಲ್ಕ ಪಾವತಿಗೆ ಟೋಲ್‌ಗಳಲ್ಲಿ ಸಾಕಷ್ಟು ಸ್ವೈಪ್‌ ಮಷಿನ್‌ಗಳನ್ನು ಎಸ್‌ಬಿಐ ಹಾಗೂ ಇತರ ಬ್ಯಾಂಕ್‌ಗಳ ನೆರವಿನೊಂದಿಗೆ ಆಳವಡಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.