ದೇಶ

ಮುಂಬೈ ಪಿಠೋಪಕರಣ ಮಾರುಕಟ್ಟೆಯಲ್ಲಿ ಭಾರಿ ಅಗ್ನಿ ಅವಘಡ!

ವಾಣಿಜ್ಯನಗರಿ ಮುಂಬೈನಲ್ಲಿರುವ ಪೀಠೋಪಕರಣ ಮಾರುಕಟ್ಟೆಯಲ್ಲಿ ಶುಕ್ರವಾರ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಕೋಟ್ಯಂತರ ಮೌಲ್ಯದ ಪೀಠೋಪಕರಣಗಳು ಅಗ್ನಿಗಾಹುತಿಯಾಗಿದೆ ಎಂದು ತಿಳಿದುಬಂದಿದೆ.

ಮುಂಬೈ ಪಿಠೋಪಕರಣ ಮಾರುಕಟ್ಟೆಯಲ್ಲಿ ಭಾರಿ ಅಗ್ನಿ ಅವಘಡ!
ಎಎನ್ಐ ಚಿತ್ರ
Published On :

ಮುಂಬೈ: ವಾಣಿಜ್ಯನಗರಿ ಮುಂಬೈನಲ್ಲಿರುವ ಪೀಠೋಪಕರಣ ಮಾರುಕಟ್ಟೆಯಲ್ಲಿ ಶುಕ್ರವಾರ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಕೋಟ್ಯಂತರ ಮೌಲ್ಯದ ಪೀಠೋಪಕರಣಗಳು ಅಗ್ನಿಗಾಹುತಿಯಾಗಿದೆ ಎಂದು ತಿಳಿದುಬಂದಿದೆ.

ಮುಂಬೈನ ಕೇಂದ್ರ ಭಾಗದಲ್ಲಿರುವ ಜೋಗೇಶ್ವರಿ ರಸ್ತೆಯ ಒಶಿವಾರಾದಲ್ಲಿರುವ ಪೀಠೋಪಕರಣ ಮಾರುಕಟ್ಟೆಯಲ್ಲಿ ಬೆಂಕಿ ಹೊತ್ತಿಕೊಂಡಿದ್ದು, 15ಕ್ಕೂ ಹೆಚ್ಚು ಅಗ್ನಿಶಾಮಕ ದಳದ ವಾಹನಗಳು ಹಾಗೂ 35ಕ್ಕೂ ಹೆಚ್ಚು ಅಗ್ನಿಶಾಮಕ  ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಈ ವರೆಗೂ ಬೆಂಕಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲವಾದರೂ, ಶಾರ್ಟ್ ಸರ್ಕ್ಯೂಟ್ ಬೆಂಕಿ ಅನಾಹುತಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗುತ್ತಿದೆ.

ಭಾರಿ ಪ್ರಮಾಣದಲ್ಲಿ ಬೆಂಕಿ ವ್ಯಾಪಿಸಿದ್ದು, ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿಗಳು ಹರಸಾಹಸಪಡುತ್ತಿದ್ದಾರೆ. ಘಟನೆಯಲ್ಲಿ ಸಾವು-ನೋವುಗಳಾದ ಕುರಿತು ಈ ವರೆಗೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಘಟನಾ ಸ್ಥಳದಲ್ಲಿ  ಹಿರಿಯ ಪೊಲೀಸ್ ಅಧಿಕಾರಿಗಳು ಮೊಕ್ಕಾಂ ಹೂಡಿದ್ದು, ಕಾರ್ಯಾಚರಣೆ ಮೇಲ್ವಿಚಾರಣೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.