ನಾಗಾಲ್ಯಾಂಡ್ ವಿಮಾನ ನಿಲ್ದಾಣದಲ್ಲಿ ಭಾರಿ ಮೊತ್ತದ ಹಣ ಸಾಗಿಸುತ್ತಿದ್ದ ವ್ಯಕ್ತಿಯ ಬಂಧನ
ಭಾರಿ ಮೊತ್ತದ ಹಣ ಸಾಗಿಸುತ್ತಿದ್ದ ವ್ಯಕ್ತಿಯನ್ನು ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್ಎಫ್) ಸಿಬ್ಬಂದಿ....

Published On :
ಗುವಾಹತಿ: ಭಾರಿ ಮೊತ್ತದ ಹಣ ಸಾಗಿಸುತ್ತಿದ್ದ ವ್ಯಕ್ತಿಯನ್ನು ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್ಎಫ್) ಸಿಬ್ಬಂದಿ ಶುಕ್ರವಾರ ನಾಗಾಲ್ಯಾಂಡ್ ನ ದಿಂಪೂರ್ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.
ಅಧಿಕೃತ ಮೂಲಗಳ ಪ್ರಕಾರ, ವ್ಯಕ್ತಿಯೊಬ್ಬ ಭಾರಿ ಮೊತ್ತದ ಹಣದೊಂದಿಗೆ ವಿಮಾನದ ಮೂಲಕ ದಿಂಪೂರ್ ಗೆ ತೆರಳುತ್ತಿದ್ದಾನೆ ಎಂಬ ಗುಪ್ತಚರ ಮಾಹಿತಿಯನ್ನು ಆಧರಿಸಿ ಸಿಐಎಸ್ಎಫ್ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ.
ಬಂಧಿತ ವ್ಯಕ್ತಿ ಅಜಯ್ ಸಿಂಗ್ ಎಂದು ಗುರುತಿಸಲಾಗಿದ್ದು, ಕೋಲ್ಕತಾದಿಂದ ದಿಂಪೂರ್ ಗೆ ಹಣ ಸಾಗಿಸುತ್ತಿದ್ದ ಎನ್ನಲಾಗಿದೆ. ಆದರೆ ಎಷ್ಟು ಹಣ ಸಾಗಿಸುತ್ತಿದ್ದ ಎಂಬುದುರ ಬಗ್ಗೆ ಇನ್ನೂ ಖಚಿತ ಮಾಹಿತಿ ಇಲ್ಲ.
ದಿಂಪೂರ್ ವಿಮಾನ ನಿಲ್ದಾಣದ ನಿರ್ದೇಶಕ ಎಂ.ಝಿಂಬೋ ಹಾಗೂ ಪೊಲೀಸ್ ಆಯುಕ್ತ ಲಿರೆಮೋ ಲೋತಾ ಅವರು ಭಾರಿ ಮೊತ್ತದ ಹಣ ಸಾಗಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಿರುವುದಾಗಿ ಖಚಿತಪಡಿಸಿದ್ದಾರೆ.
ಮಂಗಳವಾರವಷ್ಟೇ ಇದೇ ವಿಮಾನ ನಿಲ್ದಾಣದಲ್ಲಿ 3.5 ಕೋಟಿ ರುಪಾಯಿ ನಗದು ಸಾಗಿಸುತ್ತಿದ್ದ ಅಮರ್ ಜೀತ್ ಸಿಂಗ್ ಎಂಬ ಉದ್ಯಮಿಯನ್ನು ಬಂಧಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


