ದೇಶ

ಸಂದರ್ಶಕರ ಗ್ಯಾಲರಿಯಿಂದ ಲೋಕಸಭೆಗೆ ಜಿಗಿಯಲು ಯತ್ನಿಸಿದ ಅನಾಮಿಕ

ವಿಪಕ್ಷ ನಾಯಕರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸುವ ವೇಳೆ ಗ್ಯಾಲರಿಯಲ್ಲಿ ಕುಳಿತಿದ್ದ ವ್ಯಕ್ತಿ ಇದ್ದಕ್ಕಿದ್ದಂತೆ, ಮೇಲಿಂದ ಸದನದೊಳಗೆ ಜಿಗಿಯಲು ಯತ್ನಿಸಿದ್ದಾನೆ....

ಸಂದರ್ಶಕರ ಗ್ಯಾಲರಿಯಿಂದ ಲೋಕಸಭೆಗೆ ಜಿಗಿಯಲು ಯತ್ನಿಸಿದ ಅನಾಮಿಕ
ಲೋಕಸಭೆ (ಸಂಗ್ರಹ ಚಿತ್ರ)
Published On :

ನವದೆಹಲಿ: ನೋಟು ನಿಷೇಧದ ಬಗ್ಗೆ ಲೋಕಸಭೆಯಲ್ಲಿ ಗದ್ದಲ ಏರ್ಪಟ್ಟು ಸ್ಪೀಕರ್ ಸುಮಿತ್ರಾ ಮಹಾಜನ್ ಸದನವನ್ನು 40 ನಿಮಿಷಗಳ ಕಾಲ ಮುಂದೂಡಿದರು. ಈ ವೇಳೆ ಸಂದರ್ಶಕರ ಗ್ಯಾಲರಿಯಲ್ಲಿ ಕುಳಿತಿದ್ದ ವ್ಯಕ್ತಿಯೊಬ್ಬ ಲೋಕಸಭೆಗೆ ಹಾರಲು ಪ್ರಯತ್ನಿಸಿದ್ದಾನೆ.

ವಿಪಕ್ಷ ನಾಯಕರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸುವ ವೇಳೆ ಗ್ಯಾಲರಿಯಲ್ಲಿ ಕುಳಿತಿದ್ದ ವ್ಯಕ್ತಿ ಇದ್ದಕ್ಕಿದ್ದಂತೆ, ಮೇಲಿಂದ ಸದನದೊಳಗೆ ಜಿಗಿಯಲು ಯತ್ನಿಸಿದ್ದಾನೆ. ಕೂಡಲೇ ಇದನ್ನು ನೋಡಿದ ಭದ್ರತಾ ಸಿಬ್ಬಂದಿ ಆತನನ್ನು ಹಿಡಿದು ಕರೆತಂದಿದ್ದಾರೆ.

ಸದನದೊಳಗೆ ಜಿಗಿಯಲು ಯತ್ನಿಸಿದ ವ್ಯಕ್ತಿಯನ್ನು  ವಿಚಾರಣೆಗೆ ಒಳಪಡಿಸಲಾಗಿದೆ. ಇಂಥಹ ಘಟನೆಗಳನ್ನು ತಡೆಯಲು ಸಂದರ್ಶಕರ ಗ್ಯಾಲರಿಯ ಮೊದಲ ಸಾಲಿನಲ್ಲಿ ದೆಹಲಿ ಪೊಲೀಸರು ಕುಳಿತಿರುತ್ತಾರೆ.  ಸದನ ಮುಂದೂಡಿ ಸ್ಪೀಕರ್ ಸುಮಿತ್ರಾ ಮಹಾಜನ್ ಹೊರ ನಡೆದಿದ್ದರು. ಹಣಕಾಸು ಸಚಿವ ಅರುಣ್ ಜೇಟ್ಲಿ ಮತ್ತಿತರ ಹಿರಿಯ ಸಚಿವರು ಘಟನೆ ನಡೆದಾಗ ಲೋಕಸಭೆಯಲ್ಲಿ ಉಪಸ್ಥಿತರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.