ಗುರು ಗೋವಿಂದ ಸಿಂಗ್ 350ನೇ ಜನ್ಮದಿನಾಚರಣೆ: ಪಂಜಾಬ್'ಗೆ ಭೇಟಿ ನೀಡಲಿರುವ ಪ್ರಧಾನಿ ಮೋದಿ
ಸಿಕ್ಖರ 10ನೇ ಗುರು ಗುರು ಗೋವಿಂದ್ ಸಿಂಗ್ ಅವರು 350ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಪಂಜಾಬ್ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ...

ನವದೆಹಲಿ: ಸಿಕ್ಖರ 10ನೇ ಗುರು ಗುರು ಗೋವಿಂದ್ ಸಿಂಗ್ ಅವರು 350ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಪಂಜಾಬ್ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ.
ಗುರು ಗೋವಿಂದ ಸಿಂಗ್ ಅವರು 350ನೇ ಹುಟ್ಟುಹಬ್ಬ ಆಚರಣೆ ಹಿನ್ನೆಲೆಯಲ್ಲಿ ರೂಪನಗರ ಜಿಲ್ಲೆಯ ಶ್ರೀ ಆನಂದ್ ಪುರ ಸಾಹಿಬ್ ನಲ್ಲು ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮಕ್ಕೆ ಭಾಗವಹಿಸುವ ಸಲುವಾಗಿ ಮೋದಿಯವರು ಪಂಜಾಬ್ ಗೆ ಭೇಟಿ ನೀಡಲಿದ್ದಾರೆಂದು ತಿಳಿದುಬಂದಿದೆ.
ಭೇಟಿ ವೇಳೆ ಬಥಿಂದಾ ಜಿಲ್ಲೆಗೆ ಮೋದಿಯವರು ಭೇಟಿ ನೀಡಲಿದ್ದು, ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಏಮ್ಸ್) ನಿರ್ಮಾಣಕ್ಕೆ ಶಂಕು ಸ್ಥಾಪನೆ ಮಾಡಲಿದ್ದಾರೆ. ಅಲ್ಲದೆ, ಸಾರ್ವಜನಿಕ ರ್ಯಾಲಿಯೊಂದರಲ್ಲಿ ಭಾಗವಹಿಸಲಿದ್ದಾರೆಂದು ಹೇಳಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


