ದೆಹಲಿ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಪಟಾಕಿ ಮಾರಾಟ ನಿಷೇಧಿಸಿದ ಸುಪ್ರೀಂ ಕೋರ್ಟ್
ಇನ್ನು ಮುಂದೆ ರಾಜಧಾನಿ ದೆಹಲಿ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಪಟಾಕಿಗಳನ್ನು ಮಾರಾಟ...

Published On :
ನವದೆಹಲಿ: ಇನ್ನು ಮುಂದೆ ರಾಜಧಾನಿ ದೆಹಲಿ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಪಟಾಕಿಗಳನ್ನು ಮಾರಾಟ ಮಾಡಬಾರದು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ. ಇದುವರೆಗೆ ಲೈಸೆನ್ಸ್ ಹೊಂದಿದ್ದ ಎಲ್ಲಾ ಮಾರಾಟಗಾರರು ದೆಹಲಿಯಲ್ಲಿ ಪಟಾಕಿಗಳನ್ನು ಮಾರಾಟ ಮಾಡಬಹುದಾಗಿತ್ತು. ಎಲ್ಲಾ ಮಾರಾಟಗಾರರ ಅನುಮತಿ ಪತ್ರವನ್ನು ರದ್ದುಪಡಿಸುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಆದೇಶ ನೀಡಿದೆ.
ದೆಹಲಿಯಲ್ಲಿ ಮಾಲಿಲ್ಯವನ್ನು ನಿಯಂತ್ರಿಸಲು ಏನಾದರೊಂದು ಪ್ರಯತ್ನ ಮಾಡಬೇಕೆಂದು ನ್ಯಾಯಾಲಯ ಈ ಹಿಂದೆ ಹೇಳಿತ್ತು. ದೀಪಾವಳಿ ಕಳೆದ ನಂತರ ದೆಹಲಿ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಮಾಲಿನ್ಯದ ಪ್ರಮಾಣ ಅಪಾಯದ ಮಟ್ಟ ಮೀರುತ್ತಿತ್ತು.
ಪಟಾಕಿಗಳನ್ನು ಮಾರಾಟ ಮಾಡಲು ಹೊಸ ಅನುಮತಿ ಇನ್ನು ಮುಂದೆ ಯಾರಿಗೂ ಸಿಗುವುದಿಲ್ಲ ಮತ್ತು ಪ್ರಸ್ತುತ ನೀಡಿರುವ ಅನುಮತಿಗಳನ್ನು ರದ್ದುಪಡಿಸಲಾಗುತ್ತದೆ.
ದೇಶದ ರಾಜಧಾನಿ ದೆಹಲಿಯಲ್ಲಿ ಮಾಲಿನ್ಯ ದೀಪಾವಳಿ ಸಂದರ್ಭದಲ್ಲಿ ಮಿತಿಮೀರುತ್ತಿದ್ದು ಪಟಾಕಿಗಳ ಮಾರಾಟ ಮತ್ತು ಕೊಳ್ಳುವಿಕೆಗೆ ನಿಷೇಧ ಹೇರಬೇಕೆಂದು ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಈ ತೀರ್ಪು ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


