ದೇಶ

ಪಾಕ್ ಭಯೋತ್ಪಾದನೆಯಿಂದ ದ್ವಿಪಕ್ಷೀಯ ಮಾತುಕತೆ ಪೂರಕ ವಾತಾವರಣ ಹಾಳು: ಕೇಂದ್ರ ಸರ್ಕಾರ

ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನ ನಡೆಸುತ್ತಿರುವ ಭಯೋತ್ಪಾದಕ ಕೃತ್ಯಗಳಿಂದ ದ್ವಿಪಕ್ಷೀಯ ಮಾತುಕತೆ ನಡೆಸಲಾರದ ಸ್ಥಿತಿ ಉಂಟಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ಪಾಕ್ ಭಯೋತ್ಪಾದನೆಯಿಂದ ದ್ವಿಪಕ್ಷೀಯ ಮಾತುಕತೆ ಪೂರಕ ವಾತಾವರಣ ಹಾಳು: ಕೇಂದ್ರ ಸರ್ಕಾರ
ಪಾಕ್ ಭಯೋತ್ಪಾದನೆಯಿಂದ ದ್ವಿಪಕ್ಷೀಯ ಮಾತುಕತೆ ಪೂರಕ ವಾತಾವರಣ ಹಾಳು: ಕೇಂದ್ರ ಸರ್ಕಾರ
Published On :
ನವದೆಹಲಿ: ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನ ನಡೆಸುತ್ತಿರುವ ಭಯೋತ್ಪಾದಕ ಕೃತ್ಯಗಳಿಂದ ದ್ವಿಪಕ್ಷೀಯ ಮಾತುಕತೆ ನಡೆಸಲಾರದ ಸ್ಥಿತಿ ಉಂಟಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. 
ವಿದೇಶಾಂಗ ಖಾತೆ ರಾಜ್ಯ ಸಚಿವ ವಿಕೆ ಸಿಂಗ್ ಪಾಕ್-ಭಾರತ ದ್ವಿಪಕ್ಷೀಯ ಮಾತುಕತೆ ಬಗ್ಗೆ ರಾಜ್ಯಸಭೆ ಪ್ರತಿಕ್ರಿಯೆ ನೀಡಿದ್ದು, ಪಠಣ್ ಕೋಟ್ ಮೇಲಿನ ದಾಳಿ ಹಾಗೂ ಗಡಿಯಲ್ಲಿ ಪೂಂಚ್ ಉರಿ ಸೆಟರ್ ಗಳ ಮೇಲಿನ ಭಯೋತ್ಪಾದಕ ದಾಳಿ ದ್ವಿಪಕ್ಷೀಯ ಮಾತುಕತೆ ನಡೆಸುವ ವಾತಾವರಣವನ್ನು ಹಾಳುಮಾಡಿವೆ ಎಂದು ತಿಳಿಸಿದ್ದಾರೆ. 
ಭಾರತ ತನ್ನ ನೆರೆಯ ರಾಷ್ಟ್ರಗಳೊಂದಿಗೆ ಇತ್ತೀಚಿನ ದಿನಗಳಲ್ಲಿ ಸೌಹಾರ್ದಯುತ ಸಂಬಂಧ ಹೊಂದಿಲ್ಲದೇ ಇರುವ ಬಗ್ಗೆ ರಾಜ್ಯಸಭೆಯಲ್ಲಿ ವಿಕೆ ಸಿಂಗ್ ಅವರಿಗೆ ಪ್ರಶ್ನೆಯನ್ನು ಕೇಳಲಾಗಿತ್ತು. ಪ್ರತಿಪಕ್ಷಗಳ ಪ್ರಶ್ನೆಗೆ ಉತ್ತರಿಸಿರುವ ವಿಕೆ ಸಿಂಗ್, ಭಾರತ ಅಫ್ಘಾನಿಸ್ತಾನ, ಭೂತಾನ್, ಮಾಲ್ಡೀವ್ಸ್, ಮಯನ್ಮಾರ್, ಶ್ರೀಲಂಕಾ, ನೇಪಾಳದೊಂದಿಗೆ ಸೌಹಾರ್ದಯುತ ದ್ವಿಪಕ್ಷೀಯ ಸಂಬಂಧ ಹೊಂದಿದೆ, ಆದರೆ ಗಡಿ ಪ್ರದೇಶದಲ್ಲಿ ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆ ನಡೆಯುತ್ತಿರುವುದರಿಂದ ಪಾಕ್ ನೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸುವ ವಾತಾವರಣ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.