ದೇಶ

ಫಿಡೆಲ್ ಕ್ಯಾಸ್ಟ್ರೋ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

ಕ್ಯೂಬಾದ ಮಾಜಿ ಅಧ್ಯಕ್ಷ ಫಿಡೆಲ್ ಕ್ಯಾಸ್ಟ್ರೋ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಭಾರತದ ನಾಯಕರು ಸಂತಾಪ ಸೂಚಿಸಿದಾರೆ.

ಫಿಡೆಲ್ ಕ್ಯಾಸ್ಟ್ರೋ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ
ಫಿಡೆಲ್ ಕ್ಯಾಸ್ಟ್ರೋ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ
Published On :
ನವದೆಹಲಿ: ಕ್ಯೂಬಾದ ಮಾಜಿ ಅಧ್ಯಕ್ಷ ಫಿಡೆಲ್ ಕ್ಯಾಸ್ಟ್ರೋ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಭಾರತದ ನಾಯಕರು ಸಂತಾಪ ಸೂಚಿಸಿದಾರೆ. 
ಫಿಡೆಲ್ ಕ್ಯಾಸ್ಟ್ರೋ ನಿಧನಕ್ಕೆ ಸಂತಾಪ ಸೂಚಿಸಿ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಕ್ಯಾಸ್ಟ್ರೋ 20 ನೇ ಶತಮಾನದ ಅಗ್ರಗಣ್ಯ ನಾಯಕರಲ್ಲಿ ಒಬ್ಬರಾಗಿದ್ದರು, ಶ್ರೇಷ್ಠ ಸ್ನೇಹಿತನ ಸಾವಿಗೆ ಭಾರತ ದುಃಖಗೊಂಡಿದೆ ಎಂದು ಟ್ವೀಟ್ ಮಾಡಿದ್ದಾರೆ. 
ಇನ್ನು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಸಹ ಫಿಡೆಲ್ ಕ್ಯಾಸ್ಟ್ರೋ ನಿಧನಕ್ಕೆ ಸಂತಾಪ ಸೂಚಿಸಿದ್ದು, ಕ್ರಾಂತಿಕಾರಿ ನಾಯಕರಾಗಿದ್ದ ಕ್ಯಾಸ್ಟ್ರೋ ಅಲಿಪ್ತ ಚಳವಳಿಗೆ ನೀಡಿದ ಕೊಡುಗೆಗಾಗಿ ಅವಿಸ್ಮರಣೀಯರಾಗಿ ಉಳಿಯುತ್ತಾರೆ. ಅಷ್ಟೇ ಅಲ್ಲದೇ ವಿವಿಧ ವೇದಿಕೆಗಳಲ್ಲಿ ಕ್ಯಾಸ್ಟ್ರೋ ಭಾರತಕ್ಕೆ ನೀಡಿದ ಬೆಂಬಲವನ್ನು ಮರೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.