ಪ್ರತ್ಯೇಕತಾವಾದಿಗಳ ಪ್ರತಿಭಟನೆ ವಾಪಸ್: ಸಹಜ ಸ್ಥಿತಿಯತ್ತ ಕಾಶ್ಮೀರದ ಜನಜೀವನ
ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿಗಳು ನಡೆಸುತ್ತಿದ್ದ ಪ್ರತಿಭಟನೆಯನ್ನು ವಾಪಸ್ ಪಡೆದಿದ್ದು ಸಹಜ ಸ್ಥಿತಿಯ ವಾತಾವರಣ ನಿರ್ಮಾಣವಾಗಿದೆ.

Published On :
ಶ್ರೀನಗರ: ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿಗಳು ನಡೆಸುತ್ತಿದ್ದ ಪ್ರತಿಭಟನೆಯನ್ನು ವಾಪಸ್ ಪಡೆದಿದ್ದು ಸಹಜ ಸ್ಥಿತಿಯ ವಾತಾವರಣ ನಿರ್ಮಾಣವಾಗಿದೆ.
ಪ್ರತ್ಯೇಕತಾವಾದಿಗಳು ಪ್ರತಿಭಟನೆಯನ್ನು ವಾಪಸ್ ಪಡೆದಿರುವುದರಿಂದ ಸಾರ್ವಜನಿಕ ಸಂಚಾರ ವ್ಯವಸ್ಥೆ, ವ್ಯಾಪಾರ ವಹಿವಾಟುಗಳು ಪ್ರಾರಂಭವಾಗಿದ್ದು, ಸರ್ಕಾರಿ ಕಚೇರಿಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ. ಉಗ್ರ ಬುರ್ಹಾನ್ ವಾನಿಯ ಹತ್ಯೆಯನ್ನು ಖಂಡಿಸಿ ಕಳೆದ ನಾಲ್ಕು ತಿಂಗಳಿನಿಂದ ಪ್ರತ್ಯೇಕತಾವಾದಿಗಳು ಪ್ರತಿಭಟನೆಗೆ ಕರೆ ನೀಡಿದ್ದರು. ಆದರೆ ಈಗ ಎರಡು ದಿನಗಳ ವರೆಗೆ ಪ್ರತಿಭಟನೆಯನ್ನು ವಾಪಸ್ ಪಡೆದಿದ್ದಾರೆ.
ಜನಜೀವನ ಸಹಜಸ್ಥಿತಿಗೆ ಮರಳಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಶ್ರೀನಗರದಲ್ಲಿ ವಿಧಿಸಲಾಗಿದ್ದ ನಿರ್ಬಂಧಗಳನ್ನು ತೆರವುಗೊಳಿಸಿದ್ದಾರೆ. ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಉಗ್ರ ಬುರ್ಹಾನ್ ವಾನಿಯ ಹತ್ಯೆಯನ್ನು ಖಂಡಿಸಿ ಪ್ರತ್ಯೇಕತಾವಾದಿಗಳು ನಾಲ್ಕು ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


