ಕನ್ನಯ್ಯ ಕುಮಾರ್ ಸೇರಿದಂತೆ 20 ಜೆಎನ್ ಯು ವಿದ್ಯಾರ್ಥಿಗಳಿಗೆ ಶೋಕಾಸ್ ನೋಟಿಸ್
ದೇಶದ್ರೋಹ ಆರೋಪದ ಮೇಲೆ ಬಂಧನವಾಗಿದ್ದ ಕನ್ನಯ್ಯ ಕುಮಾರ್ ಸೇರಿದಂತೆ 20 ಜೆಎನ್ ಯು ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳಿಗೆ ವಿವಿ ಆಡಳಿತ ಮಂಡಳಿ ...

ನವದೆಹಲಿ: ದೇಶದ್ರೋಹ ಆರೋಪದ ಮೇಲೆ ಬಂಧನವಾಗಿದ್ದ ಕನ್ನಯ್ಯ ಕುಮಾರ್ ಸೇರಿದಂತೆ 20 ಜೆಎನ್ ಯು ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳಿಗೆ ವಿವಿ ಆಡಳಿತ ಮಂಡಳಿ ನೋಟಿಸ್ ನೀಡಿದೆ.
ವಿವಿ ಉಪಕುಲಪತಿ ಹಾಗೂ ಇತರೆ ಹಿರಿಯ ಅಧಿಕಾರಿಗಳನ್ನು ಆಡಳಿತ ಕಚೇರಿಯ ಕಟ್ಟಡದಲ್ಲಿ ಅಕ್ರಮವಾಗಿ ಬಂಧನದಲ್ಲಿರಿಸಿದ ಸಂಬಂಧ ವಿವರಣೆ ನೀಡುವಂತೆ ಜೆಎನ್ ಯು ವಿವಿ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ಕನ್ನಯ್ಯ ಕುಮಾರ್ ಮತ್ತು ಉಮರ್ ಖಾಲಿದ್ ಒಳಗೊಂಡಂತೆ 20 ವಿದ್ಯಾರ್ಥಿಗಳಿಗೆ ನೋಟಿಸ್ ನೀಡಲಾಗಿದೆ.
ಬಯೋಟೆಕ್ನಾಲಜಿ ವಿದ್ಯಾರ್ಥಿ ನಜೀಬ್ ಅಹಮದ್ ಕಳೆದ ಅಕ್ಟೋಬರ್ 15 ರಿಂದ ನಾಪತ್ತೆಯಾಗಿದ್ದ ಹಿನ್ನಲೆಯಲ್ಲಿ ಕನ್ನಯ್ಯ ನೇತೃತ್ವದಲ್ಲಿ ವಿವಿಯ ಆಡಳಿತ ಕಚೇರಿಯಲ್ಲಿ ಸುಮಾರು 20 ಗಂಟೆಗಳ ಕಾಲ ಉಪಕುಲಪತಿ ಮತ್ತಿತರರನ್ನು ಬಂಧಿಸಿಡಲಾಗಿತ್ತು, ಈ ಸಂಬಂಧ 20 ವಿದ್ಯಾರ್ಥಿಗಳಿಗೂ ವಿವಿ ಆಡಳಿತ ಮಂಡಳಿ ನೋಟಿಸ್ ಜಾರಿ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


