ದೇಶ

ಕಳಪೆ ಸಂಸದ ರಾಹುಲ್ ಗಾಂಧಿ ಪ್ರಧಾನಿಯನ್ನು ಪ್ರಶ್ನಿಸಲು ಅನರ್ಹ: ಬಿಜೆಪಿ

ಕಳಪೆ ಗುಣಮಟ್ಟ ಹೊಂದಿರುವ ಸಂಸದರಾಗಿರುವ ರಾಹುಲ್ ಗಾಂಧಿ ಪ್ರಧಾನಿಯನ್ನು ಪ್ರಶ್ನಿಸುವುದಕ್ಕೆ ಅನರ್ಹರು ಎಂದು ಬಿಜೆಪಿ ಹೇಳಿದೆ.

ಕಳಪೆ ಸಂಸದ ರಾಹುಲ್ ಗಾಂಧಿ ಪ್ರಧಾನಿಯನ್ನು ಪ್ರಶ್ನಿಸಲು ಅನರ್ಹ: ಬಿಜೆಪಿ
ರಾಹುಲ್ ಗಾಂಧಿ
Published On :
ನವದೆಹಲಿ: ಸಂಸತ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಅನುಪಸ್ಥಿತಿಯನ್ನು ಪ್ರಶ್ನಿಸಿದ್ದ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಬಿಜೆಪಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದು, ಕಳಪೆ ಗುಣಮಟ್ಟ ಹೊಂದಿರುವ ಸಂಸದರಾಗಿರುವ ರಾಹುಲ್ ಗಾಂಧಿ ಪ್ರಧಾನಿಯನ್ನು ಪ್ರಶ್ನಿಸುವುದಕ್ಕೆ ಅನರ್ಹರು ಎಂದು ಹೇಳಿದೆ. 
ಸಂಸತ್ ಅಧಿವೇಶನಕ್ಕೆ ಅಪರೂಪಕ್ಕೆ ಆಗಮಿಸುವ ರಾಹುಲ್ ಗಾಂಧಿ ಸಂಸತ್ ನ ಹೊರಗೂ ಉತ್ತಮ ಕೆಲಸಗಳನ್ನು ಮಾಡುತ್ತಿಲ್ಲ. ಆದ್ದರಿಂದ ಅವರು ಪ್ರಧಾನಿ ಮೋದಿ ಅವರ ಅನುಪಸ್ಥಿತಿಯನ್ನು ಪ್ರಶ್ನಿಸಲು ಅರ್ಹರಲ್ಲ, ರಾಹುಲ್ ಗಾಂಧಿ ಪ್ರಧಾನಿ ಮೋದಿ ಅವರನ್ನು ಪ್ರಶ್ನಿಸುವುದು ಹಾಸ್ಯಾಸ್ಪದ ಎಂದು ಬಿಜೆಪಿ ನಾಯಕ ಜಿವಿಎಲ್ ನರಸಿಂಹರಾವ್ ಹೇಳಿದ್ದಾರೆ. 
ಪ್ರಧಾನಿ ನರೇಂದ್ರ ಮೋದಿ ಜನರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿದ್ದಾರೆ. ಕಳೆದ 2 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಆಡಳಿತದಲ್ಲಿ ಶಿಸ್ತು ಹಾಗೂ ಗಮನಾರ್ಹ ಬದಲಾವಣೆಗಳನ್ನು ತಂದಿದ್ದಾರೆ. ಆದ್ದಿರಿಂದ ಕಾಂಗ್ರೆಸ್ ಪಕ್ಷ ಪ್ರಧಾನಿ ಮೋದಿ ಅವರನ್ನು ಪ್ರಶ್ನಿಸುವುದಕ್ಕೂ ಮುನ್ನ ರಾಹುಲ್ ಗಾಂಧಿಗೆ ಮೂಲಭೂತ ಸಂಸದೀಯ ಹೊಣೆಗಾರಿಕೆಯನ್ನು ಕಲಿಯಲು ಸೂಚಿಸುವುದು ಸೂಕ್ತ ಎಂದು ಬಿಜೆಪಿ ನಾಯಕ ನರಸಿಂಹರಾವ್ ತಿಳಿಸಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.