ಪಂಜಾಬ್ ನಬಾ ಜೈಲಿನ ಮೇಲೆ ಶಸ್ತ್ರಾಸ್ತ್ರಧಾರಿಗಳ ದಾಳಿ: 5 ಉಗ್ರರು ಪರಾರಿ
ಪಂಜಾಬ್'ನಲ್ಲಿರುವ ನಬಾ ಜೈಲಿನ ಮೇಲೆ ಶಸ್ತ್ರಾಸ್ತ್ರಧಾರಿಗಳ ಗುಂಪೊಂದು ದಾಳಿ ಮಾಡಿದ್ದು, ಖಾಲಿಸ್ತಾನ್ ವಿಮೋಚನಾ ದಳದ ಮುಖ್ಯಸ್ಥ ಹರ್ಮೀಂದರ್ ಸಿಂಗ್ ಮಿಂಟೂ ಸೇರಿದಂತೆ ಐವರು ಉಗ್ರರು ಪರಾರಿಯಾಗಿರುವ ಘಟನೆ ಭಾನುವಾರ ನಡೆದಿದೆ...

ಚಂಡೀಗಢ: ಪಂಜಾಬ್'ನಲ್ಲಿರುವ ನಬಾಜೈಲಿನ ಮೇಲೆ ಶಸ್ತ್ರಾಸ್ತ್ರಧಾರಿಗಳ ಗುಂಪೊಂದು ದಾಳಿ ಮಾಡಿದ್ದು, ಖಲಿಸ್ತಾನ್ ವಿಮೋಚನಾ ದಳದ ಮುಖ್ಯಸ್ಥ ಹರ್ಮೀಂದರ್ ಸಿಂಗ್ ಮಿಂಟೂ ಸೇರಿದಂತೆ ಐವರು ಉಗ್ರರು ಪರಾರಿಯಾಗಿರುವ ಘಟನೆ ಭಾನುವಾರ ನಡೆದಿದೆ.
ಪೊಲೀಸರ ಸಮವಸ್ತ್ರ ಧರಿಸಿ ಬಂದಿರುವ 10 ಮಂದಿ ಶಸ್ತ್ರಾಸ್ತ್ರಧಾರಿಗಳು ಜೈಲಿನ ಒಳ ನುಗ್ಗಿದ್ದಾರೆ. ಈ ವೇಳೆ ನೂರು ಸುತ್ತು ಗುಂಡು ಹಾರಿಸಿ ಬಂಧನದಲ್ಲಿರಿಸಲಾಗಿದ್ದ ಖಲಿಸ್ತಾನ ವಿಮೋಚನಾ ದಳದ ಮುಖ್ಯಸ್ಥ ಹರ್ಮಿಂದರ್ ಸಿಂಗ್ ಮಿಂಟೂ ಸೇರಿದಂದೆ ನಾಲ್ವರು ಉಗ್ರರನ್ನು ಬಂಧನ ಮುಕ್ತ ಗೊಳಿಸಿ ಸಿನಿಮೀಯ ರೀತಿಯಲ್ಲಿ ಸ್ಥಳದಿಂದ ಪರಾರಿಯಾಗಿದ್ದಾರೆ.
ಹರ್ಮಿಂದರ್ ಸೇರಿದಂತೆ ಗುರ್ಪ್ರೀತ್ ಸಿಂಗ್, ವಿಕಿ, ಗೋಂಧ್ರಾ, ನಿತಿನ್ ಡಿಯೋಲ್ ಹಾಗೂ ವಿಕ್ರಮ ಜೀತ್ ಸಿಂಗ್ ವಿಕಿ ಪರಾರಿಯಾಗಿದ್ದಾರೆಂದು ತಿಳಿದುಬಂದಿದೆ.
ದಾಳಿಯೊಂದು ಪೂರ್ವ ನಿಯೋಜಿತ ಕೃತ್ಯವಾಗಿದ್ದು, ಜೈಲಿನಲ್ಲಿ ಭದ್ರತಾ ಲೋಪಗಳಿರುವುದು ಕೃತ್ಯದಿಂದ ಬಹಿರಂಗಗೊಂಡಿದೆ. ದಾಳಿ ಹಾಗೂ ಉಗ್ರರು ಪರಾರಿಯಾಗಿರುವ ಹಿನ್ನೆಲೆಯಲ್ಲಿ ಪಂಜಾಬ್ ನಾದ್ಯತಂ ಹೈ ಅಲರ್ಟ್ ಘೋಷಿಸಲಾಗಿದೆ. ಉಗ್ರರು ಪರಾರಿಯಾಗಿರುವುದನ್ನು ಡಿಜಿಪಿ ಹೆಚ್.ಎಸ್. ದಿಲ್ಲೋನ್ ಅವರು ಖಚಿತಪಡಿಸಿದ್ದಾರೆ.
ಖಲಿಸ್ತಾನ್ ವಿಮೋಚನಾ ದಳದ ಮುಖ್ಯಸ್ಥ ಹರ್ಮೀಂದರ್ ಸಿಂಗ್ ಮಿಂಟೂಸಾಕಷ್ಟು ಉಗ್ರ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದು, ಪಾಕಿಸ್ತಾನ ಸೇರಿದಂತೆ ವಿದೇಶಗಳಲ್ಲಿ ಉಗ್ರ ಚಟುವಟಿಕೆಗಳನ್ನು ನಡೆಸುವ ಸಲುವಾಗಿ ನಿಧಿ ಸಂಗ್ರಹಿಸುತ್ತಿದ್ದ. ಇದರಂತೆ ಖಚಿತ ಮಾಹಿತಿ ಆಧಾರದ ಮೇಲೆ ಪಂಜಾಬ್ ಪೊಲೀಸರು ಈತನನ್ನು 2014ರಲ್ಲಿ ಬಂಧನಕ್ಕೊಳಪಡಿಸಿದ್ದರು. ಪರಾರಿಯಾದವರ ಪೈಕಿ ವಿಕಿ ಗೊಂಡಾರ್ ಎಂಬಾತ ಕುಖ್ಯಾತ ಗ್ಯಾಂಗ್ ಸ್ಟರ್ ಆಗಿದ್ದರು, ಹಲವು ಪ್ರಕರಣಗಳಿಗೆ ಸಂಬಂಧಿಸಿದಂತೆ ಸಹಚರರೊಂದಿಗೆ ಬಂಧನಕ್ಕೊಳಪಡಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


