ದೇಶ

ಪಂಜಾಬ್ ಜೈಲಿನ ಮೇಲೆ ದಾಳಿ: ವರದಿ ಕೇಳಿದ ಗೃಹ ಸಚಿವಾಲಯ

ಪಂಜಾಬ್'ನ ನಬಾ ಜೈಲಿನ ಮೇಲೆ ಶಸ್ತ್ರಾಸ್ತ್ರಧಾರಿಗಳು ದಾಳಿ ಮಾಡಿ ಉಗ್ರರನ್ನು ಬಂಧನ ಮುಕ್ತಗೊಳಿಸಿ ಪರಾರಿಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ಸಲ್ಲಿಸುವಂತೆ ಗೃಹ ಸಚಿವಾಲಯ ಪಂಜಾಬ್ ಸರ್ಕಾರಕ್ಕೆ...

ಪಂಜಾಬ್ ಜೈಲಿನ ಮೇಲೆ ದಾಳಿ: ವರದಿ ಕೇಳಿದ ಗೃಹ ಸಚಿವಾಲಯ
ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್
Published On :

ನವದೆಹಲಿ: ಪಂಜಾಬ್'ನ ನಬಾ ಜೈಲಿನ ಮೇಲೆ ಶಸ್ತ್ರಾಸ್ತ್ರಧಾರಿಗಳು ದಾಳಿ ಮಾಡಿ ಉಗ್ರರನ್ನು ಬಂಧನ ಮುಕ್ತಗೊಳಿಸಿ ಪರಾರಿಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ಸಲ್ಲಿಸುವಂತೆ ಗೃಹ ಸಚಿವಾಲಯ ಪಂಜಾಬ್ ಸರ್ಕಾರಕ್ಕೆ ಭಾನುವಾರ ಆದೇಶಿಸಿದೆ.

ನಬಾ ಜೈಲಿಗೆ ಸಾಕಷ್ಟು ಭದ್ರತೆಯನ್ನು ಒದಗಿಸಿದ್ದರೂ ಭದ್ರತೆ ನಡುವೆ ಶಸ್ತ್ರಾಸ್ತ್ರಧಾರಿಗಳು ಜೈಲಿನ ಒಳ ಪ್ರವೇಶ ಮಾಡಿರುವುದು ಸಾಕಷ್ಟು ಸಂಶಯಗಳನ್ನು ಹುಟ್ಟುಹಾಕಿದೆ. ಈ ಹಿನ್ನಲೆಯಲ್ಲಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಗೃಹ ಸಚಿವಾಲಯವು ಕೂಡಲೇ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ ಎಂದು ತಿಳಿದುಬಂದಿದೆ.

ಪೊಲೀಸರ ಸಮವಸ್ತ್ರ ಧರಿಸಿ ಬಂದಿದ್ದ 10 ಮಂದಿ ಶಸ್ತ್ರಾಸ್ತ್ರಧಾರಿಗಳು ಪಂಜಾಬ್ ನ ನಬಾ ಜೈಲಿನ ಒಳ ನುಗ್ಗಿದ್ದರು. ಈ ವೇಳೆ ನೂರು ಸುತ್ತು ಗುಂಡು ಹಾರಿಸಿ ಬಂಧನದಲ್ಲಿರಿಸಲಾಗಿದ್ದ ಖಾಲಿಸ್ತಾನ ವಿಮೋಚನಾ ದಳದ ಮುಖ್ಯಸ್ಥ ಹರ್ಮಿಂದರ್ ಸಿಂಗ್ ಮಿಂಟೂ ಸೇರಿದಂತೆ ನಾಲ್ವರು ಉಗ್ರರನ್ನು ಬಂಧನ ಮುಕ್ತ ಗೊಳಿಸಿ ಸಿನಿಮೀಯ ರೀತಿಯಲ್ಲಿ ಸ್ಥಳದಿಂದ ಪರಾರಿಯಾಗಿದ್ದರು.

ಉಗ್ರರ ಪರಾರಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಪಂಜಾಬ್ ಸರ್ಕಾರ, ಜೈಲು ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಂಡು ಕರ್ತವ್ಯ ಲೋಪದ ಮೇರೆಗೆ ಗೃಹಖಾತೆಯನ್ನೂ ಹೊಂದಿರುವ ಪಂಜಾಬ್ ಉಪ ಮುಖ್ಯಮಂತ್ರಿ ಸುಖ್ ಬೀರ್ ಬಾದಲ್ ಅವರು, ಜೈಲು ಅಧೀಕ್ಷಕ ಹಾಗೂ ಉಪ ಜೈಲು ಅಧೀಕ್ಷಕರನ್ನು ವಜಾ ಮಾಡಿ ಆದೇಶ ಹೊರಡಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.