ದೇಶ

ಆರ್ಥಿಕ ಪರಿಸ್ಥಿತಿ ಕುರಿತಂತೆ ಆರ್ ಬಿಐ ನಿರಂತರ ನಿಗಾವಹಿಸಿದ್ದು, ಬಿಕ್ಕಟ್ಟು ಶಮನಕ್ಕೆ ಪ್ರಯತ್ನಿಸುತ್ತಿದೆ: ಉರ್ಜಿತ್ ಪಟೇಲ್

ನೋಟು ನಿಷೇಧದ ಬಳಿಕ ದೇಶದಲ್ಲಿ ಉಂಟಾಗಿರುವ ಆರ್ಥಿಕ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ನಿರಂತರವಾಗಿ ನಿಗಾ ವಹಿಸಿದ್ದು, ಜನರ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಸಕಲ ಕ್ರಮಗಳನ್ನು ಕೈಗೊಂಡಿದೆ ಎಂದು ಆರ್ ಬಿಐ ಗವರ್ನರ್ ಉರ್ಜಿತ್ ಪಟೇಲ್ ಹೇಳಿದ್ದಾರೆ.

ಆರ್ಥಿಕ ಪರಿಸ್ಥಿತಿ ಕುರಿತಂತೆ ಆರ್ ಬಿಐ ನಿರಂತರ ನಿಗಾವಹಿಸಿದ್ದು, ಬಿಕ್ಕಟ್ಟು ಶಮನಕ್ಕೆ ಪ್ರಯತ್ನಿಸುತ್ತಿದೆ: ಉರ್ಜಿತ್ ಪಟೇಲ್
ಸಂಗ್ರಹ ಚಿತ್ರ
Published On :

ನವದೆಹಲಿ: ನೋಟು ನಿಷೇಧದ ಬಳಿಕ ದೇಶದಲ್ಲಿ ಉಂಟಾಗಿರುವ ಆರ್ಥಿಕ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ನಿರಂತರವಾಗಿ ನಿಗಾ ವಹಿಸಿದ್ದು, ಜನರ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಸಕಲ  ಕ್ರಮಗಳನ್ನು ಕೈಗೊಂಡಿದೆ ಎಂದು ಆರ್ ಬಿಐ ಗವರ್ನರ್ ಉರ್ಜಿತ್ ಪಟೇಲ್ ಹೇಳಿದ್ದಾರೆ.

ನೋಟು ನಿಷೇಧ ಬಳಿಕ ಉಂಟಾಗಿರ ಸಮಸ್ಯೆಗಳ ಕುರಿತಂತೆ ಇದೇ ಮೊದಲ ಬಾರಿಗೆ ಸುದ್ದಿಸಂಸ್ಥೆಯೊಂದಿದೆ ಮಾತನಾಡಿ ತಮ್ಮ ಮೌನ ಮುರಿದಿರುವ ಉರ್ಜಿತ್ ಪಟೇಲ್ ಅವರು, ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಲಿಕ್ವಿಡಿಟಿಯನ್ನು  ಹೆಚ್ಚಿಸಲಾಗಿದೆ. ಪ್ರಸ್ತುತ ತಲೆದೋರಿರುವ  ಬಿಕ್ಕಟ್ಟನ್ನು ಬಗೆಹರಿಸಿ ಪರಿಸ್ಥಿತಿಯನ್ನು ಸಾಮಾನ್ಯಗೊಳಿಸಲು ಆರ್ ಬಿಐ ಸತತವಾಗಿ ಶ್ರಮಿಸುತ್ತಿದೆ. ಬೇಡಿಕೆಗೆ ಅನುಗುಣವಾಗಿ ಹೊಸ ನೋಟುಗಳು ಲಭಿಸುವಂತೆ ಮಾಡಲು  ಕ್ರಮ  ಕೈಗೊಳ್ಳಲಾಗಿದ್ದು, ಮುದ್ರಣಾಲಯಗಳಲ್ಲಿ ಪೂರ್ಣ ಸಾಮರ್ಥ್ಯ ಬಳಸಿ ನೋಟುಗಳನ್ನು ಮುದ್ರಿಸುತ್ತಿವೆ. ಪ್ರಮಾಣಿಕ ನಾಗರಿಕರ ಸಮಸ್ಯೆಯನ್ನು ಶೀಘ್ರವಾಗಿ ಪರಿಹರಿಸುವ ಕ್ರಮ ಕೈಗೊಂಡಿದ್ದೇವೆ ಎಂದು ಹೇಳಿದರು.

ಇದೇ ವೇಳೆ ಬ್ಯಾಂಕುಗಳ ಕುರಿತು ಎದ್ದಿರುವ ಅಪಸ್ವರ ಕುರಿತು ಮಾತನಾಡಿದ ಉರ್ಜಿತ್ ಪಟೇಲ್ ಅವರು, ಬ್ಯಾಂಕುಗಳ ನಿಗದಿತ ಸಮಯಕ್ಕಿಂತ ಮೊದಲೇ ಸ್ಥಗಿತಗೊಳ್ಳುತ್ತಿವೆ ಎಂಬ ಆರೋಪಗಳು ಕೇಳಿಬಂದಿವೆ. ಆದರೆ ನೋಟು  ನಿಷೇಧದ ಬಳಿಕ ಬ್ಯಾಂಕುಗಳ ಸಿಬ್ಬಂದಿ ತಮ್ಮ ಶಕ್ತಿ ಮೀರಿ ಕೆಲಸ ಮಾಡುತ್ತಿದ್ದಾರೆ. ಹಲವು ಬ್ಯಾಂಕುಗಳಲ್ಲಿ ನಿಗದಿತ ಸಮಯಕ್ಕಿಂತ ಹೆಚ್ಚುವರಿ ಅವಧಿಯಲ್ಲೂ ಸಿಬ್ಬಂದಿಗಳು ಕಾರ್ಯ ನಿರ್ವಹಿಸಿದ್ದಾರೆ. ಹೀಗಾಗಿ ಬ್ಯಾಂಕುಗಳ ಕಾರ್ಯ  ವೈಖರಿ ಬಗ್ಗೆ ಯಾವುದೇ ಸಂಶಯ ಬೇಡ ಎಂದು ಉರ್ಜಿತ್ ಪಟೇಲ್ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.