ರಾಮ ಮಂದಿರ ನಿರ್ಮಾಣ: ಸುಪ್ರೀಂ ತೀರ್ಪಿಗೆ ಬದ್ಧ ಎಂದ ಸ್ವಾಮಿ, ಒವೈಸಿ
ರಾಮ ಮಂದಿರ ನಿರ್ಮಾಣ ಕುರಿತಂತೆ ಸುಪ್ರೀಂಕೋರ್ಟ್ ಯಾವುದೇ ತೀರ್ಪು ನೀಡಿದರೂ ಅದಕ್ಕೆ ನಾವು ಬದ್ಧ ಎಂದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಮತ್ತು...

Published On :
ನವದೆಹಲಿ: ರಾಮ ಮಂದಿರ ನಿರ್ಮಾಣ ಕುರಿತಂತೆ ಸುಪ್ರೀಂಕೋರ್ಟ್ ಯಾವುದೇ ತೀರ್ಪು ನೀಡಿದರೂ ಅದಕ್ಕೆ ನಾವು ಬದ್ಧ ಎಂದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಮತ್ತು ಎಐಎಂಐಎಂ ನಾಯಕ ಅಸಾದುದ್ದೀನ್ ಒವೈಸಿ ಸ್ಪಷ್ಟಪಡಿಸಿದ್ದಾರೆ.
ಅಯೋಧ್ಯೆಯಲ್ಲಿನ ವಿವಾದಿತ ರಾಮ ಮಂದಿರ-ಬಾಬ್ರಿ ಮಸೀದಿ ನಿರ್ಮಾಣ ಪ್ರಕರಣ ಸುಪ್ರೀಂಕೋರ್ಟ್ ನಲ್ಲಿರುವುದರಿಂದ ಸುಪ್ರೀಂ ತೀರ್ಪನ್ನು ಒಪ್ಪುವುದಾಗಿ ಸಂವಾದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಇಬ್ಬರು ನಾಯಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಇಬ್ಬರೂ ನಾಯಕರು ಪ್ರಕರಣ ಸಂಬಂಧ ನೇರವಾಗಿ ಯಾವುದೇ ನಂಟು ಹೊಂದಿಲ್ಲವಾದರೂ, ಸ್ವಾಮಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಪರ ಹೋರಾಟ ನಡೆಸುತ್ತಿದ್ದರೆ, ಒವೈಸಿ ಬಾಬ್ರಿ ಮಸೀದಿ ಧ್ವಂಸವನ್ನು ಕಟುವಾಗಿ ವಿರೋಧಿಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
supreme courtಸುಪ್ರೀಂಕೋರ್ಟ್Subramanian Swamyಸುಬ್ರಮಣಿಯನ್ ಸ್ವಾಮಿRam MandirAsaduddin Owaisiರಾಮ ಮಂದಿರಅಸಾದುದ್ದೀನ್ ಒವೈಸಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


