ದೇಶ

ಪ್ರತಿಭಟನೆ ಸರಿಯಲ್ಲವಾದರೆ, ಪ್ರಧಾನಿಯವರು ಪ್ರಜಾಪ್ರಭುತ್ವದ ಕಲ್ಪನೆಯನ್ನು ತಿಳಿಸಲಿ: ಕಾಂಗ್ರೆಸ್

ನೋಟುಗಳ ಚಲಾವಣೆ ರದ್ದತಿಯಿಂದ ಜನರಿಗೆ ಉಂಟಾಗುತ್ತಿರುವ ಸಮಸ್ಯೆಗಳನ್ನು ಗಮನಕ್ಕೆ ತರಲು...

ಪ್ರತಿಭಟನೆ ಸರಿಯಲ್ಲವಾದರೆ, ಪ್ರಧಾನಿಯವರು ಪ್ರಜಾಪ್ರಭುತ್ವದ ಕಲ್ಪನೆಯನ್ನು ತಿಳಿಸಲಿ: ಕಾಂಗ್ರೆಸ್
ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್
Published On :
ನವದೆಹಲಿ: ನೋಟುಗಳ ಚಲಾವಣೆ ರದ್ದತಿಯಿಂದ ಜನರಿಗೆ ಉಂಟಾಗುತ್ತಿರುವ ಸಮಸ್ಯೆಗಳನ್ನು ಗಮನಕ್ಕೆ ತರಲು ಆಯೋಜಿಸಿರುವ ಪ್ರತಿಭಟನೆ ಮಾಡುವುದು ಒಳ್ಳೆಯ ಕೆಲಸವಲ್ಲ ಎಂದು ಪ್ರಧಾನಿ ನರೇಂದ್ರ ಮೋದಿಯವರು ಭಾವಿಸುವುದಾದರೆ ಪ್ರಜಾಪ್ರಭುತ್ವದ ಬಗ್ಗೆ ಅವರ ಆಲೋಚನೆಗಳನ್ನು ವಿವರಿಸಬೇಕು ಎಂದು ಕಾಂಗ್ರೆಸ್ ನಾಯಕ ಮತ್ತು ಮಾಜಿ ವಿದೇಶಾಂಗ ಸಚಿವ ಸಲ್ಮಾನ್ ಖುರ್ಷಿದ್ ಹೇಳಿದ್ದಾರೆ.
ಪ್ರಧಾನಿಯವರು ಪ್ರತಿಭಟನೆ ಮಾಡುವುದು ಕೆಟ್ಟ ಕೆಲಸ ಮತ್ತು ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ಮಾಡಬಾರದು ಎಂದು ಅವರು ಹೇಳುವುದಾದರೆ ಅವರ ಭಾವನೆಯಲ್ಲಿ ಪ್ರಜಾಪ್ರಭುತ್ವ ಎಂದರೇನೆಂಬುದನ್ನು ತಿಳಿಸಲಿ. ಅವರು ಒಳ್ಳೆಯ ಕೆಲಸ ಮಾಡುತ್ತಾರಾದರೆ ಜನರಿಂದ ಬೆಂಬಲ ಸಿಕ್ಕೇ ಸಿಗುತ್ತದೆ. ಅವರ ಕೆಲಸ ಸರಿಯಾಗಿಲ್ಲದಿದ್ದರೆ ಜನರು ಟೀಕಿಸುತ್ತಾರೆ, ಅಂತಿಮವಾಗಿ ಯಾರು ಸರಿಯಾದ ಮಾರ್ಗದಲ್ಲಿ ನಡೆಯುತ್ತಾರೆಯೋ ಅವರು ಮೇಲುಗೈ ಸಾಧಿಸುತ್ತಾರೆ ಎಂದರು.
ಸಹಜವಾಗಿ ಜನರ ಬೆಂಬಲ ಸಿಗುವುದರಿಂದ ಭ್ರಷ್ಟಾಚಾರದ ವಿಷಯದಲ್ಲಿ ಪ್ರಧಾನಿಯವರು ಆತಂಕಪಡಬೇಕಾದ ಅಗತ್ಯವಿದೆ ಎಂದು ನನಗನಿಸುವುದಿಲ್ಲ. ಭ್ರಷ್ಟಾಚಾರ ವಿಷಯವನ್ನು ಪ್ರಾಮಾಣಿಕವಾಗಿ ಅವರು ನಿಭಾಯಿಸಬೇಕು. ಅದನ್ನು ಭ್ರಷ್ಠ ಮಾದರಿಯಲ್ಲಿ ನಡೆಸಿಕೊಂಡು ಹೋದರೆ ವಿರೋಧ ಖಂಡಿತವಾಗಿಯೂ ವ್ಯಕ್ತವಾಗುತ್ತದೆ ಎಂದು ಹೇಳಿದರು.
ನಿನ್ನೆ ಉತ್ತರ ಪ್ರದೇಶದ ಖುಷಿನಗರದಲ್ಲಿ ಮಾತನಾಡಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರತಿಪಕ್ಷಗಳ ವಿರುದ್ಧ ವಾಗ್ಧಾಳಿ ನಡೆಸಿ ನೋಟುಗಳ ರದ್ಧಿನ ವಿರುದ್ಧ ರಾಷ್ಟ್ರಾದ್ಯಂತ ಪ್ರತಿಭಟನೆ ನಡೆಸುವ ಪ್ರತಿಪಕ್ಷಗಳ ಯೋಜನೆ ಬಗ್ಗೆ ಟೀಕಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.