ಭ್ರಷ್ಟಾಚಾರ ವಿರುದ್ಧದ ಹೋರಾಟ ಕೇವಲ ಒಂದು ಪಕ್ಷಕ್ಕೆ ಸೀಮಿತವಾದುದಲ್ಲ: ಶಿವಸೇನೆ
ಪ್ರತೀಯೊಬ್ಬರಿಗೂ ಭ್ರಷ್ಟಾಚಾರವನ್ನು ತೊಡೆದುಹಾಕಬೇಕೆಂಬ ಉದ್ದೇಶವಿದ್ದು, ಇದು ಕೇವಲ ಒಂದು ಪಕ್ಷಕ್ಕೆ ಸೀಮಿತವಾದುದಲ್ಲ. ಕೇಂದ್ರ ಸರ್ಕಾರ ನಿರ್ಧಾರ ಒಂದೆಡೆ ಸರಿಯಿದೆ. ಆದರೆ, ನಿರ್ಧಾರ ತೆಗೆದುಕೊಂಡಿರುವ ರೀತಿ ಸರಿಯಲ್ಲ ಎಂದು...

ನವದೆಹಲಿ: ಪ್ರತೀಯೊಬ್ಬರಿಗೂ ಭ್ರಷ್ಟಾಚಾರವನ್ನು ತೊಡೆದುಹಾಕಬೇಕೆಂಬ ಉದ್ದೇಶವಿದ್ದು, ಇದು ಕೇವಲ ಒಂದು ಪಕ್ಷಕ್ಕೆ ಸೀಮಿತವಾದುದಲ್ಲ. ಕೇಂದ್ರ ಸರ್ಕಾರ ನಿರ್ಧಾರ ಒಂದೆಡೆ ಸರಿಯಿದೆ. ಆದರೆ, ನಿರ್ಧಾರ ತೆಗೆದುಕೊಂಡಿರುವ ರೀತಿ ಸರಿಯಲ್ಲ ಎಂದು ಶಿವಸೇನೆ ಸೋಮವಾರ ಹೇಳಿದೆ.
ಈ ಕುರಿತಂತೆ ಮಾತನಾಡಿರುವ ಶಿವಸೇನೆ ನಾಯಕ ಸಂಜಯ್ ರಾವತ್ ಅವರು, ದೇಶದೆಲ್ಲಡೆ ಎಟಿಎಂ ಗಳು ಹಾಗೂ ಬ್ಯಾಂಕುಗಳ ಎದುರು ಜನರು ಸಾಲಿನಲ್ಲಿ ನಿಂತಿರುವುದನ್ನು ನೋಡುತ್ತಿದ್ದರೆ ಸಾಕಷ್ಟು ಆಘಾತವಾಗುತ್ತದೆ. ಯಾವಾಗ ಸಮಸ್ಯೆ ಕೊನೆಗೊಳ್ಳುತ್ತದೆ ಎಂಬುದರ ಬಗ್ಗೆ ಆಲೋಚಿಸುತ್ತಿರುತ್ತೇನೆ. ನೋಟು ನಿಷೇಧ ಕುರಿತಂತೆ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ನಮ್ಮ ಬೆಂಬಲವಿದೆ. ಆದರೆ, ಕೇಂದ್ರದ ನಿರ್ಧಾರದಿಂದ ಇಂದು ಸಾಮಾನ್ಯ ಜನರು ಸಮಸ್ಯೆ ಎದುರಿಸುತ್ತಿದ್ದಾರೆ. ಈ ಸಮಸ್ಯೆಯನ್ನು ಸರ್ಕಾರದ ಗಮನಕ್ಕೆ ತರುವ ಪ್ರಯತ್ನಗಳನ್ನು ನಾವು ಮಾಡುತ್ತಿದ್ದೇವೆಂದು ಹೇಳಿದ್ದಾರೆ.
ಕೇಂದ್ರದ ನಿರ್ಧಾರದಲ್ಲಿ ತಪ್ಪಿದೆ ಎಂಬುದು ನನಗನ್ನಿಸುತ್ತಿಲ್ಲ. ಆದರೆ, ಯೋಜನೆಯನ್ನು ಸರಿಯಾದ ರೀತಿಯಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿಲ್ಲ. ಪ್ರತೀಯೊಬ್ಬರೂ ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡಲು ಇಚ್ಛಿಸುತ್ತಾರೆ. ಈ ಉದ್ದೇಶ ಕೇವಲ ಒಂದು ಪಕ್ಷಕ್ಕೆ ಸೀಮಿತವಾದುದಲ್ಲ. ಪ್ರತೀಯೊಬ್ಬರಿಗೂ ದೇಶಭಕ್ತಿಯಿರುತ್ತದೆ ಮತ್ತು ನಮ್ಮ ದೇಶವನ್ನು ಉತ್ತಮ ರಾಷ್ಟ್ರವಾಗಿಸಬೇಕೆಂಬ ಉದ್ದೇಶವನ್ನು ಹೊಂದಿರುತ್ತಾರೆಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


