ನೋಟು ನಿಷೇಧ ನಿರ್ಧಾರದಿಂದ ಭಾರತ ಸ್ತಬ್ಧ: ಮಾಯಾವತಿ
ವಿರೋಧ ಪಕ್ಷಗಳು ಕರೆ ನೀಡಿರುವ 'ಭಾರತ್ ಬಂದ್'ಗೆ ನಮ್ಮ ಬೆಂಬಲವಿಲ್ಲ ಆದರೆ, ನೋಟಿನ ಮೇಲೆ ನಿಷೇಧ ಹೇರಿರುವ ರೀತಿಯ ವಿರುದ್ಧ ನಾವು ಪ್ರತಿಭಟಿಸುತ್ತಿದ್ದೇವೆಂದು ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿಯವರು...

ನವದೆಹಲಿ: ವಿರೋಧ ಪಕ್ಷಗಳು ಕರೆ ನೀಡಿರುವ 'ಭಾರತ್ ಬಂದ್'ಗೆ ನಮ್ಮ ಬೆಂಬಲವಿಲ್ಲ ಆದರೆ, ನೋಟಿನ ಮೇಲೆ ನಿಷೇಧ ಹೇರಿರುವ ರೀತಿಯ ವಿರುದ್ಧ ನಾವು ಪ್ರತಿಭಟಿಸುತ್ತಿದ್ದೇವೆಂದು ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿಯವರು ಸೋಮವಾರ ಹೇಳಿದ್ದಾರೆ.
ವಿರೋಧ ಪಕ್ಷಗಳು ಕರೆಯಿಂದಾಗಿ ಇಂದು ಭಾರತ ಬಂದ್ ಆಗಿದೆ ಎಂದು ಬಿಜೆಪಿ ನಾಯಕರು ಆರೋಪ ವ್ಯಕ್ತಪಡಿಸುತ್ತಿದ್ದಾರೆ. ಆದರೆ, ಸ್ವತಃ ಪ್ರಧಾನಮಂತ್ರಿ ನರೇಂದ್ರ ಮೋದಿಯವರೇ ನೋಟು ಮೇಲೆ ನಿಷೇಧ ಹೇರುವ ನಿರ್ಧಾರ ಕೈಗೊಳ್ಳುವ ಮೂಲಕ ಭಾರತ ಸ್ತಬ್ಧಗೊಳ್ಳುವಂತೆ ಮಾಡಿದ್ದಾರೆ. ಭಾರತ ಬಂದ್ ಆಗಿರುವುದಕ್ಕೆ ನಾವು ಜವಾಬ್ದಾರರಲ್ಲ ಎಂದು ಹೇಳಿದ್ದಾರೆ.
ಭ್ರಷ್ಟಾಚಾರವಾಗಿಲೀ ಅಥವಾ ಕಪ್ಪುಹಣದ ಪರವಾಗಲಿ ನಮ್ಮ ಬೆಂಬಲವಿಲ್ಲ. ಆದರೆ, ನಿರ್ಧಾರದಿಂದ ಸಾಮಾನ್ಯ ಜನರು ಸಮಸ್ಯೆ ಎದುರಿಸುತ್ತಿರುವುದರ ವಿರುದ್ಧ ವಿರೋಧ ಪಕ್ಷಗಳು ಪ್ರತಿಭಟನೆ ನಡೆಸುತ್ತಿವೆ. ಹೊರ ನಿಂತು ಪ್ರತಿಕ್ರಿಯೆ ನೀಡುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ವಿರೋಧ ಪಕ್ಷಗಳ ಪ್ರಶ್ನೆಗೆ ಉತ್ತರಿಸಲು ಬರುತ್ತಿಲ್ಲ? ಎಂದು ಪ್ರಶ್ನಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


