ದೇಶದ ಜನತೆ ನೋಟು ನಿಷೇಧಕ್ಕೆ ಬೆಂಬಲವನ್ನು ವ್ಯಕ್ತಪಡಿಸಿದೆ: ರವಿ ಶಂಕರ್ ಪ್ರಸಾದ್
ಇಡೀದ ದೇಶದ ಜನತೆಯೇ ಕೇಂದ್ರ ನೋಟು ನಿಷೇಧಕ್ಕೆ ಬೆಂಬಲವನ್ನು ವ್ಯಕ್ತಪಡಿಸಿದ್ದು, ವಿರೋಧ ಪಕ್ಷಗಳು ಮಾತ್ರ ಸಂಸತ್ತಿನಲ್ಲಿ ಕಲಾಪ ಸುಗಮವಾಗಿ ಸಾಗಲು ಬಿಡುತ್ತಿಲ್ಲ ಎಂದು ಕೇಂದ್ರ ಕಾನೂನು ಮತ್ತು ಮಾಹಿತಿ ಸಚಿವ ಶಂಕರ್ ಪ್ರಸಾದ್...

ನವದೆಹಲಿ: ಇಡೀದ ದೇಶದ ಜನತೆಯೇ ಕೇಂದ್ರ ನೋಟು ನಿಷೇಧಕ್ಕೆ ಬೆಂಬಲವನ್ನು ವ್ಯಕ್ತಪಡಿಸಿದ್ದು, ವಿರೋಧ ಪಕ್ಷಗಳು ಮಾತ್ರ ಸಂಸತ್ತಿನಲ್ಲಿ ಕಲಾಪ ಸುಗಮವಾಗಿ ಸಾಗಲು ಬಿಡುತ್ತಿಲ್ಲ ಎಂದು ಕೇಂದ್ರ ಕಾನೂನು ಮತ್ತು ಮಾಹಿತಿ ಸಚಿವ ರವಿ ಶಂಕರ್ ಪ್ರಸಾದ್ ಅವರು ಸೋಮವಾರ ಹೇಳಿದ್ದಾರೆ.
ದೇಶದ ಜನತೆ ಕೇಂದ್ರ ನಿರ್ಧಾರಕ್ಕೆ ಬೆಂಬಲ ವ್ಯಕ್ತಪಡಿಸಿದ್ದು, ವಿರೋಧ ಪಕ್ಷಗಳು ಕರೆ ನೀಡಿದ್ದ ಭಾರತ್ ಬಂದ್'ಗೆ ಮಹತ್ವವನ್ನು ಪಡೆದುಕೊಂಡಿಲ್ಲ. ಜನತೆಯೇ ಕೇಂದ್ರಕ್ಕೆ ಬೆಂಬಲವನ್ನು ನೀಡಿದ್ದರೂ, ವಿರೋಧ ಪಕ್ಷಗಳು ಮಾತ್ರ ಸಂಸತ್ತು ಸರಿಯಾದ ರೀತಿಯಲ್ಲಿ ಕಾರ್ಯನಿರ್ವಹಿಸಲು ಬಿಡುತ್ತಿಲ್ಲ ಎಂದು ಹೇಳಿದ್ದಾರೆ.
ನೋಟು ನಿಷೇಧ ಕುರಿತಂತೆ ಚರ್ಚೆ ನಡೆಸಲು ಸರ್ಕಾರ ಸಿದ್ಧವಿದ್ದರೂ, ಚರ್ಚೆ ನಡೆಸಲು ಇಷ್ಟವಿಲ್ಲ ವಿರೋಧ ಪಕ್ಷಗಳು ಸಂಸತ್ತಿನಲ್ಲಿ ಗದ್ದಲವನ್ನುಂಟು ಮಾಡುತ್ತಿವೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


