ಭಾರತ-ಪಾಕ್ ನಡುವಿನ ನೀರಿನ ಸಮಸ್ಯೆಯನ್ನು ಆ ರಾಷ್ಟ್ರಗಳೇ ಪರಿಹರಿಸಿಕೊಳ್ಳಲಿವೆ: ಬಾನ್ ಕಿ ಮೂನ್
ಭಾರತ-ಪಾಕಿಸ್ತಾನದ ನಡುವೆ ಇರುವ ನೀರಿನ ಸಮಸ್ಯೆಯನ್ನು ಆ ಎರಡು ರಾಷ್ಟ್ರಗಳೇ ಬಗೆಹರಿಸಿಕೊಳ್ಳಲಿವೆ ಎಂಬ ವಿಶ್ವಾಸವಿದೆ ಎಂದು ವಿಶ್ವಸಂಸ್ಥೆ ಕಾರ್ಯದರ್ಶಿ ಬಾನ್ ಕಿ-ಮೂನ್ ಹೇಳಿದ್ದಾರೆ.
Published On :
ವಿಶ್ವಸಂಸ್ಥೆ: ಭಾರತ-ಪಾಕಿಸ್ತಾನದ ನಡುವೆ ಇರುವ ನೀರಿನ ಸಮಸ್ಯೆಯನ್ನು ಆ ಎರಡು ರಾಷ್ಟ್ರಗಳೇ ಬಗೆಹರಿಸಿಕೊಳ್ಳಲಿವೆ ಎಂಬ ವಿಶ್ವಾಸವಿದೆ ಎಂದು ವಿಶ್ವಸಂಸ್ಥೆ ಕಾರ್ಯದರ್ಶಿ ಬಾನ್ ಕಿ-ಮೂನ್ ಹೇಳಿದ್ದಾರೆ.
ನೀರಿನ ವಿವಾದ ಬಗ್ಗೆ ನಾವು ಗಮನಹರಿಸುತ್ತೇವೆ, ಆದರೆ ಭಾರತ-ಪಾಕಿಸ್ತಾನಗಳೇ ಆ ವಿವಾದಗಳನ್ನು ಬಗೆಹರಿಸಿಕೊಳ್ಳುತ್ತವೆ ಎಂಬ ವಿಶ್ವಾಸವಿದೆ ಎಂದು ಬಾನ್ ಕಿ-ಮೂನ್ ಅವರ ವಕ್ತಾರ ಸ್ಟೀಫನ್ ಡುಜರ್ರಿಕ್ ಹೇಳಿದ್ದಾರೆ. ಭಾರತ-ಪಾಕ್ ನಡುವೆ ದ್ವಿಪಕ್ಷೀಯ ಸಂಬಂಧ ಹದಗೆಟ್ಟಿರುವ ಸಂದರ್ಭದಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಪಾಕಿಸ್ತಾನಕ್ಕೆ ಹರಿಯುತ್ತಿರುವ ಸಿಂಧೂ ನದಿ ನೀರನ್ನು ನಿಲ್ಲಿಸುವ ಬಗ್ಗೆ ಹೇಳಿಕೆ ನೀಡಿದ್ದರು ಈ ಬೆನ್ನಲ್ಲೇ ವಿಶ್ವಸಂಸ್ಥೆ ಕಾರ್ಯದರ್ಶಿ ಪ್ರತಿಕ್ರಿಯೆ ನೀಡಿದ್ದಾರೆ.
ಇದೇ ವೇಳೆ ಭಾರತ-ಪಾಕಿಸ್ತಾನದ ದ್ವಿಪಕ್ಷೀಯ ಸಂಬಂಧದ ಬಗ್ಗೆ ಮಾತನಾಡಿರುವ ಬಾನ್ ಕಿ-ಮೂನ್, ಭಾರತ-ಪಾಕ್ ನಡುವಿನ ಸಂಬಂಧ ಹದಗೆಟ್ಟಿರುವುದು ಆತಂಕಕಾರಿ ಸಂಗತಿ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

