ಮೋದಿ ಹತ್ಯೆಗೆ ಸಂಚು, ಮದುರೈನಲ್ಲಿ ಮತ್ತಿಬ್ಬರು ಶಂಕಿತರ ಬಂಧನ
ದೇಶಾದ್ಯಂತ ಕೋರ್ಟ್ ಆವರಣಗಳಲ್ಲಿ ನಡೆದ ಸ್ಫೋಟ ಪ್ರಕರಣಗಳ ತನಿಖೆಯನ್ನು ಚುರುಕುಗೊಳಿಸಿರುವ ರಾಷ್ಟ್ರೀಯ ತನಿಖಾ ತಂಡ(ಎನ್ಐಎ)....

Published On :
ಚೆನ್ನೈ: ದೇಶಾದ್ಯಂತ ಕೋರ್ಟ್ ಆವರಣಗಳಲ್ಲಿ ನಡೆದ ಸ್ಫೋಟ ಪ್ರಕರಣಗಳ ತನಿಖೆಯನ್ನು ಚುರುಕುಗೊಳಿಸಿರುವ ರಾಷ್ಟ್ರೀಯ ತನಿಖಾ ತಂಡ(ಎನ್ಐಎ) ಮಂಗಳವಾರ ಮದುರೈನಲ್ಲಿ ಮತ್ತಿಬ್ಬರು ಶಂಕಿತರನ್ನು ಬಂಧಿಸಿದೆ.
ಜಿಲ್ಲಾ ಪೊಲೀಸರು ಓರ್ವನ ಬಂಧನವನ್ನು ಖಚಿತಪಡಿಸಿದ್ದು, ಎರಡನೇ ಬಂಧನದ ಬಗ್ಗೆ ಇನ್ನು ಸ್ಪಷ್ಟ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ.
ನಿನ್ನೆಯಷ್ಟೇ ಮದುರೈನಲ್ಲಿ ಮೂವರು ಉಗ್ರರನ್ನು ಎನ್ಐಎ ಬಂಧಿಸಿದ್ದು, ಮೈಸೂರು ಕೋರ್ಟ್ ಆವರಣದಲ್ಲಿ ನಡೆದಿದ್ದ ಬಾಂಬ್ ಸ್ಪೋಟ ಪ್ರಕರಣ, ಚಿತ್ತೂರ್, ಕೊಲ್ಲಂ ನೆಲ್ಲೂರ ಮತ್ತು ಮಲಪ್ಪುರಂ ಗಳಲ್ಲಿ ನಡೆದಿದ್ದ ಸ್ಫೋಟ ಪ್ರಕರಣಗಳಲ್ಲಿ ಬಂಧಿತ ಉಗ್ರರ ಕೈವಾಡವಿದೆ ಎನ್ನಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಪ್ರಮುಖ ನಾಯಕರುಗಳ ಹತ್ಯೆಗೆ ಟಾರ್ಗೆಟ್ ಮಾಡಿದ್ದರು ಎಂದು ಮೂಲಗಳು ತಿಳಿಸಿವೆ.ಜೊತೆಗೆ ವಿದೇಶಾಂಗ ಕಚೇರಿ ಮೇಲೂ ಕೂಡ ದಾಳಿಗೆ ಸಂಚು ನಡೆದಿತ್ತು ಎನ್ನಲಾಗಿದೆ.
ಬಂಧಿತರು ಎಂ. ಕರೀಮ್, ಆಸಿಫ್ ಸುಲ್ತಾನ್ ಮೊಹಮದ್,ಸುಲೈಮಾನ್ ಮತ್ತು ಅಬ್ಬಾಸ್ ಅಲಿ ಎಂದು ಗುರುತಿಸಲಾಗಿದ್ದು, ಪೊಲೀಸರು ಅವರಿಂದ ಹಲವು ಸ್ಫೋಟಕಗಳನ್ನು ವಶಪಡಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


