ದೇಶ

ಭಾರತದೊಂದಿಗೆ ಮಾತುಕತೆ ನಡೆಸಲು ಪಾಕ್ ಸಿದ್ಧ: ಅಬ್ದುಲ್ ಬಸಿತ್

ಭಾರತದಿಂದ ಮಾತುಕತೆಗೆ ಆಹ್ವಾನ ಬಂದಿದ್ದೇ ಆದರೆ, ಭಾರತದೊಂದಿಗೆ ಮಾತುಕತೆ ನಡೆಸಲು ಪಾಕಿಸ್ತಾನ ಸಿದ್ಧವಿದೆ ಎಂದು ಭಾರತದಲ್ಲಿರುವ ಪಾಕಿಸ್ತಾನ ರಾಯಭಾರಿ ಅಬ್ದುಲ್ ಬಸಿತ್ ಅವರು ಮಂಗಳವಾರ ಹೇಳಿದ್ದಾರೆ...

ಭಾರತದೊಂದಿಗೆ ಮಾತುಕತೆ ನಡೆಸಲು ಪಾಕ್ ಸಿದ್ಧ: ಅಬ್ದುಲ್ ಬಸಿತ್
ಭಾರತದಲ್ಲಿರುವ ಪಾಕಿಸ್ತಾನ ರಾಯಭಾರಿ ಅಬ್ದುಲ್ ಬಸಿತ್
Published On :

ನವದೆಹಲಿ: ಭಾರತದಿಂದ ಮಾತುಕತೆಗೆ ಆಹ್ವಾನ ಬಂದಿದ್ದೇ ಆದರೆ, ಭಾರತದೊಂದಿಗೆ ಮಾತುಕತೆ ನಡೆಸಲು ಪಾಕಿಸ್ತಾನ ಸಿದ್ಧವಿದೆ ಎಂದು ಭಾರತದಲ್ಲಿರುವ ಪಾಕಿಸ್ತಾನ ರಾಯಭಾರಿ ಅಬ್ದುಲ್ ಬಸಿತ್ ಅವರು ಮಂಗಳವಾರ ಹೇಳಿದ್ದಾರೆ.

ಅಮೃತಸರದಲ್ಲಿ ಮುಂದಿನ ವಾರ ಹಾರ್ಟ್ ಆಫ್ ಎಷ್ಯಾ ಸಮಾವೇಶ ನಡೆಯಲಿದ್ದು, ಈ ಸಮಾವೇಶಕ್ಕೆ ಪಾಕಿಸ್ತಾನ ವಿದೇಶಾಂಗ ಸಲಹೆಗಾರ ಸರ್ತಾಜ್ ಅಜೀಜ್ ಅವರು ಭಾಗವಹಿಸಲಿದ್ದಾರೆಂದು ಹೇಳಲಾಗುತ್ತಿತ್ತು. ಆದರೆ, ಇದೀಗ ಸರ್ತಾಜ್ ಅಜೀಜ್ ಅವರು ಸಮಾವೇಶದಲ್ಲಿ ಭಾಗವಹಿಸುವುದು ಅನುಮಾನವೆಂಬ ಮಾತುಗಳು ಕೇಳಿಬರುತ್ತಿವೆ.

ಈ ಹಿನ್ನೆಲೆಯಲ್ಲಿ ಖಾಸಗಿ ಮಾಧ್ಯಮವೊಂದರಲ್ಲಿ ಮಾತನಾಡಿರುವ ಅಬ್ದುಲ್ ಬಸಿತ್ ಅವರು, ಮಾತುಕತೆ ನಡೆಸುವ ಕುರಿತಂತೆ ಭಾರತದಿಂದ ಆಹ್ವಾನ ಬಂದಿದ್ದೇ ಆದರೆ, ಪಾಕಿಸ್ತಾನ ಈ ಆಹ್ವಾನವನ್ನು ಒಪ್ಪಿಕೊಳ್ಳಲಿದೆ. ಭಾರತದೊಂದಿಗೆ ಮಾತುಕತೆ ನಡೆಸಲು ಪಾಕಿಸ್ತಾನ ಸಿದ್ಧವಿದೆ ಎಂದು ಹೇಳಿದ್ದಾರೆಂದು ಡಾನ್ ವರದಿ ಮಾಡಿದೆ.

ಮಾತುಕತೆ ನಡೆಸುವುದನ್ನು ತಿಂಗಳು ಅಥವಾ ವರ್ಷಗಳ ಕಾಲ ತಡ ಮಾಡಬಹುದು. ಆದರೆ, ಭಾರತ ಮತ್ತು ಪಾಕಿಸ್ತಾನ ಉಭಯ ದೇಶಗಳ ನಡುವಿನ ಸಮಸ್ಯೆಗಳು ಮಾತುಕತೆ ನಡೆಸುವುದರ ಮೂಲಕವಷ್ಟೇ ಬಗೆಹರಿಸಿಕೊಳ್ಲಲು ಸಾಧ್ಯ. ಎರಡೂ ರಾಷ್ಟ್ರಗಳು ಒಂದೆಡೆ ಕುಳಿತು ವಿಚಾರ ಹಾಗೂ ಸಮಸ್ಯೆಗಳ ಕುರಿತು ಚರ್ಚೆ ನಡೆಸಬೇಕಿದೆ ಎಂದಿದ್ದಾರೆ.

ಅಲ್ಲದೆ, ಗಡಿಯಲ್ಲಿ ನಿರ್ಮಾಣವಾಗಿರುವ ಉದ್ವಿಗ್ನ ವಾತಾವರಣ ಕುರಿತಂತೆ ಮಾತನಾಡಿರುವ ಆವರು, ಗಡಿಯಲ್ಲಿ ನಿರ್ಮಾಣವಾಗಿರುವ ವಾತಾವರಣ ಎರಡು ದೇಶಗಳನ್ನು ಇಬ್ಭಾಗ ಮಾಡುತ್ತದೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಬಂಧ ಹದೆಗೆಡಬೇಕೆಂದು ಯಾರೂ ಬಯಸುವುದಿಲ್ಲ. 2003ರ ಕದನ ವಿರಾಮ ಉಲ್ಲಂಘನೆ ಒಪ್ಪಂದವನ್ನು ಅರ್ಥ ಮಾಡಿಕೊಳ್ಳಬೇಕಿದ್ದು, ಇದರಿಂದ ಉಭಯ ದೇಶಗಳ ಶತ್ರುತ್ವ ಬಗೆಹರಿಯಲಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.