ನಗದು ರಹಿತ ರಾಷ್ಟ್ರವಾಗಿಸುವುದು ನಮ್ಮ ಉದ್ದೇಶ: ಪ್ರಧಾನಿ ಮೋದಿ
ದೇಶವನ್ನು ನಗದು ರಾಷ್ಟ್ರವಾಗಿಸುವ ಉದ್ದೇಶ ನಮ್ಮದಾಗಿದ್ದು, ಆರ್ಥಿಕ ಡಿಜಿಟಲೀಕರಣ ಹಾಗೂ ದೇಶವನ್ನು ನಗದು ರಹಿತ ರಾಷ್ಟ್ರವಾಗಿಸುವುದಕ್ಕೆ ಬೆಂಬಲ ವ್ಯಕ್ತಪಡಿಸುವಂತೆ ಜನತೆಯ ಬಳಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಂಗಳವಾರ...

ನವದೆಹಲಿ: ದೇಶವನ್ನು ನಗದು ರಾಷ್ಟ್ರವಾಗಿಸುವ ಉದ್ದೇಶ ನಮ್ಮದಾಗಿದ್ದು, ಆರ್ಥಿಕ ಡಿಜಿಟಲೀಕರಣ ಹಾಗೂ ದೇಶವನ್ನು ನಗದು ರಹಿತ ರಾಷ್ಟ್ರವಾಗಿಸುವುದಕ್ಕೆ ಬೆಂಬಲ ವ್ಯಕ್ತಪಡಿಸುವಂತೆ ಜನತೆಯ ಬಳಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಂಗಳವಾರ ಮನವಿ ಮಾಡಿದ್ದಾರೆ.
ಸಂಸತ್ತಿನಲ್ಲಿ ನಡೆಯುತ್ತಿರುವ ಬಿಜೆಪಿ ಸಂಸದೀಯ ಸಭೆಯಲ್ಲಿ ಮಾತನಾಡಿರುವ ಅವರು, ಬಡವರನ್ನು ಅಭಿವೃದ್ಧಿಗೊಳಿಸುವ ಉದ್ದೇಶದಿಂದ ಕಪ್ಪುಹಣದ ವಿರುದ್ಧ ಹೋರಾಟ ಹಾಗೂ ತೆರಿಗೆಗಳ್ಳರ ವಿರುದ್ಧದ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಸಭೆ ಬಳಿಕ ಮಾತನಾಡಿರುವ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಅನಂತ್ ಕುಮಾರ್ ಅವರು, ನಗದು ರಹಿತ ಸಮಾಜ ಹಾಗೂ ದೇಶವನ್ನು ಆರ್ಥಿಕ ಡಿಜಿಟಲೀಕರಣ ಮಾಡುವುದು ಸರ್ಕಾರದ ಉದ್ದೇಶವಾಗಿದ್ದು, ಪ್ರಧಾನಮಂತ್ರಿ ಬಡವಲ ಕಲ್ಯಾಣ ಯೋಜನೆ ಮೂಲಕ ಬಡ ಜನರಿಗೆ ನೀರು, ಶೌಚಾಲಯ, ವೈದ್ಯಕೀಯ ಸೌಲಭ್ಯ ಹಾಗೂ ಶೈಕ್ಷಣಿಕ ಸೌಲಭ್ಯಗಳನ್ನು ನೀಡುವುದು ನಮ್ಮ ಗುರಿಯಾಗಿದೆ ಎಂದು ಹೇಳಿದ್ದಾರೆ.
ಇದೇ ವೇಳೆ ನೋಟು ನಿಷೇಧ ಕುರಿತಂತೆ ವಿರೋಧ ಪಕ್ಷಗಳ ಪ್ರತಿಭಟನೆ ಕುರಿತಂತೆ ಮಾತನಾಡಿರುವ ಅವರು, ರಾಜ್ಯಸಭೆ ಹಾಗೂ ಲೋಕಸಭೆಯಲ್ಲಿ ಚರ್ಚೆ ನಡೆಸಲು ಸರ್ಕಾರ ಸಿದ್ಧವಿದೆ. ಆದರೆ, ಚರ್ಚೆ ಆರಂಭವಾಗುತ್ತಿದ್ದಂತೆ ವಿರೋಧ ಪಕ್ಷಗಳು ಪ್ರತಿಭಟನೆ ಮಾಡುತ್ತವೆ. ನಾನು ಚರ್ಚೆ ನಡೆಸಲು ಸಿದ್ಧರಿದ್ದೇವೆ, ಆದರೆ, ವಿರೋಧ ಪಕ್ಷಗಳಿಗಿರುವ ಸಮಸ್ಯೆಯಾದರೂ ಏನು ಎಂಬುದು ಅರ್ಥವಾಗುತ್ತಿಲ್ಲ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


