ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತೆ ಆಸ್ಪತ್ರೆಗೆ ದಾಖಲು
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಮಂಗಳವಾರ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

Published On :
ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಮಂಗಳವಾರ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸೋನಿಯಾ ಗಾಂಧಿ ಅವರು ಇಂದು ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದು, ನಿಯಮಿತ ಪರೀಕ್ಷೆಗಳಿಗಾಗಿ ದಾಖಲಾಗಿದ್ದಾರೋ ಅಥವಾ ಅನಾರೋಗ್ಯದಿಂದ ದಾಖಲಾಗಿದ್ದಾರೋ ಎಂಬುದರ ಬಗ್ಗೆ ಇನ್ನೂ ಯಾವುದೇ ಖಚಿತ ಮಾಹಿತಿ ಲಭ್ಯವಾಗಿಲ್ಲ.
ಕಳೆದ ಆಗಸ್ಟ್ ನಲ್ಲಿ ರ್ಯಾಲಿಯೊಂದರಲ್ಲಿ ಅಸ್ವಸ್ಥಗೊಂಡಿದ್ದ ಸೋನಿಯಾ ಗಾಂಧಿ ಅವರು ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದರು. ಎರಡು ದಿನಗಳ ಚಿಕಿತ್ಸೆಯ ನಂತರ ಡಿಸ್ಚಾರ್ಜ್ ಆಗಿದ್ದರು. ಇದೀಗ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


