ಮಾತನಾಡುವುದನ್ನು ಬಿಟ್ಟು, ಪಾಕ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಮೋದಿಗೆ ಶಶಿ ತರೂರ್
ಭಯೋತ್ಪಾದನೆ ಮಟ್ಟಹಾಕುವ ಕುರಿತಂತೆ ಕೇವಲ ಮಾತುಗಳನ್ನಾಡುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಮಾತನಾಡುವುದನ್ನು ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಿದೆ ಎಂದು ಕಾಂಗ್ರೆಸ್ ನಾಯಕ ಶಶಿ ತರೂರ್...

ಜೈಪುರ: ಭಯೋತ್ಪಾದನೆ ಮಟ್ಟಹಾಕುವ ಕುರಿತಂತೆ ಕೇವಲ ಮಾತುಗಳನ್ನಾಡುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಮಾತನಾಡುವುದನ್ನು ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಿದೆ ಎಂದು ಕಾಂಗ್ರೆಸ್ ನಾಯಕ ಶಶಿ ತರೂರ್ ಅವರು ಬುಧವಾರ ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ನಗ್ರೋಟಾ ದಾಳಿ ಕುರಿತಂತೆ ಮಾತನಾಡಿರುವ ಅವರು, ಆಡಳಿತ ನಡೆಸುತ್ತಿರುವ ನಮ್ಮ ಸರ್ಕಾರ ಮಾತನಾಡುವುದನ್ನು ನಿಲ್ಲಿಸಿ, ಕ್ರಮ ಕೈಗೊಳ್ಳಬೇಕಿದೆ. ಪಾಕಿಸ್ತಾನಕ್ಕೆ ದಿಟ್ಟ ಉತ್ತರ ನೀಡುತ್ತೇವೆಂದು ಹೇಳುತ್ತಲೇ ಬಂದಿರುವ ಮೋದಿ ಹಾಗೂ ಪರಿಕ್ಕರ್ ಅವರ ಹೇಳಿಕೆಗಳನ್ನು ಕೇಳಿ ಕೇಳಿ ಸಾಕಾಗಿದೆ. ಇಂದು ನಮ್ಮ ಯೋಧರು ಹುತಾತ್ಮರಾಗುತ್ತಿದ್ದಾರೆ. ನಿಜಕ್ಕೂ ಪ್ರತೀಕಾರ ತೀರಿಸಿಕೊಳ್ಳಬೇಕೆಂದಿದ್ದರೆ, ಮಾತನಾಡುವುದನ್ನು ಬಿಟ್ಟು ಮೊದಲು ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ನಗ್ರೋಟಾ ಮೇಲೆ ದಾಳಿ ನಡೆಸಿದ್ದ ಉಗ್ರರು ಅಟ್ಟಹಾಸವನ್ನು ಮೆರೆದ್ದರು. ಪೊಲೀಸರ ಸಮವಸ್ತ್ರ ಧರಿಸಿ ಬಂದಿದ್ದ ಉಗ್ರರು ನಗ್ರೋಟಾದಲ್ಲಿನ 16 ಕೋರ್ ಸೇನಾ ಶಿಬಿರದ ಮೇಲೆ ದಾಳಿನಡೆಸಿದ್ದರು. ದಾಳಿಯಲ್ಲಿ ಬೆಂಗಳೂರು ಮೂಲದ ಮೇಜರ್ ಅಕ್ಷಯ್ ಗಿರೀಶ್ ಕುಮಾರ್ ಸಹಿತ 7 ಮಂದಿ ಯೋಧರನ್ನು ಬಲಿಪಡೆದುಕೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


