ಸರ್ಕಾರ ಶೇ.50ರಷ್ಚು ಕಪ್ಪು ಹಣ ವಾಪಸ್ ಕಾಳಧನಿಕರಿಗೆ ನೀಡುತ್ತಿದೆ: ರಾಹುಲ್ ಗಾಂಧಿ
ಆದಾಯ ತೆರಿಗೆ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಕೇಂದ್ರ ಸರ್ಕಾರ ಕಾಳಧನಿಕರಿಗೆ ಸಹಾಯ ಮಾಡುತ್ತಿದೆ ಎಂದು ಕಾಂಗ್ರೆಸ್....

Published On :
ನವದೆಹಲಿ: ಆದಾಯ ತೆರಿಗೆ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಕೇಂದ್ರ ಸರ್ಕಾರ ಕಾಳಧನಿಕರಿಗೆ ಸಹಾಯ ಮಾಡುತ್ತಿದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಬುಧವಾರ ಆರೋಪಿಸಿದ್ದಾರೆ.
ಸಂಸತ್ ಹೊರಗಡೆ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ ನೋಟ್ ನಿಷೇಧಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಸರ್ಕಾರ ಕಾಳಧನಿಕರಿಗೆ ಶೇ.50ರಷ್ಟು ಕಪ್ಪು ಹಣವನ್ನು ವಾಪಸ್ ನೀಡುತ್ತಿದೆ ಎಂದು ಹೇಳಿದ್ದಾರೆ.
ನೋಟ್ ನಿಷೇಧದ ನಂತರ ಕಪ್ಪು ಹಣವನ್ನು ಬಿಳಿ ಮಾಡಿಕೊಳ್ಳಲು ಕೇಂದ್ರ ಸರ್ಕಾರ ಆದಾಯ ತೆರಿಗೆ ತಿದ್ದುಪಡಿ ಮಸೂದೆ-2016ನ್ನು ಲೋಕಸಭೆಯಲ್ಲಿ ಅಂಗೀಕರಿಸಿದ್ದು, ಈ ಮಸೂದೆ ಪ್ರಕಾರ, ಕಾಳಧನಿಕರು ಶೇ.50ರಷ್ಟು ತೆರಿಗೆ ಕಟ್ಟುವ ಮೂಲಕ ತಮ್ಮ ಕಪ್ಪು ಹಣವನ್ನು ಬಿಳಿ ಮಾಡಿಕೊಳ್ಳಬಹುದಾಗಿದೆ.
ಇದೇ ವೇಳೆ ಹುತಾತ್ಮ ಯೋಧರಿಗೆ ಗೌರವ ಸಲ್ಲಿಸದಿರುವ ಬಗ್ಗೆ ಪ್ರತಿಕ್ರಿಯಿಸಿದ ರಾಹುಲ್, ದೇಶಕ್ಕಾಗಿ ಹೋರಾಡಿ ಹುತಾತ್ಮರಾದ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸುವುದು ಸಂಸತ್ತಿನಲ್ಲಿ ಈ ಹಿಂದಿನಿಂದಲೂ ನಡೆದುಕೊಂಡು ಬಂದಿರುವ ನಿಯಮ ಹಾಗೂ ಸಂಪ್ರದಾಯವಾಗಿದೆ. ಆದರೆ, ಈ ಸಂಪ್ರದಾಯವನ್ನು ಸಂಸತ್ತು ಇಂದು ಮರೆತಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


