ಮಮತಾ ಬ್ಯಾನರ್ಜಿ ಜೀವಕ್ಕೆ ಅಪಾಯವಿದೆ: ಟಿಎಂಸಿ
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಹಾಗೂ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಜೀವಕ್ಕೆ ಅಪಾಯವಿದೆ ಎಂದು ಸಂಸತ್ತಿನಲ್ಲಿ ತೃಣಮೂಲ ಕಾಂಗ್ರೆಸ್ ...

ನವದೆಹಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಹಾಗೂ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಜೀವಕ್ಕೆ ಅಪಾಯವಿದೆ ಎಂದು ಸಂಸತ್ತಿನಲ್ಲಿ ತೃಣಮೂಲ ಕಾಂಗ್ರೆಸ್ ಸದಸ್ಯರು ಆರೋಪಿಸಿದ್ದಾರೆ.
ಮಮತಾ ಅವರ ಜೀವಕ್ಕೆ ಅಪಾಯವಿದೆ ಎಂಬುದಕ್ಕೆ ಅವರು ಪ್ರಯಾಣಿಸುತ್ತಿದ್ದ ವಿಮಾನ ಇದ್ದಕ್ಕಿದ್ದಂತೆ ಲ್ಯಾಂಡ್ ಆಗಿರುವುದು ಇದಕ್ಕೆ ಮತ್ತಷ್ಟು ಪುಷ್ಠಿ ನೀಡುತ್ತಿದೆ, ಖಾಸಗಿ ವಿಮಾನದಲ್ಲಿ ಇಂಧನ ಕಡಿಮೆಯಿತ್ತು. ಹೀಗಾಗಿ ವಿಮಾನ ಕೆಳಗಿಳಿಸಬೇಕಿತ್ತು. ಆದರೆ ಪೈಲಟ್ ಕೂಡಲೇ ವಿಮಾನ ಕೆಳಗಿಳಿಸದೇ ಸುಮಾರು ಅರ್ಧಗಂಟೆಗೂ ಹೆಚ್ಚು ಕಾಲ ವಿಳಂಬ ಮಾಡಲಾಯಿತು. ಮಮತಾ ಕೊಲೆಗೆ ಸಂಚುರೂಪಿಸಲಾಗಿದೆ ಎಂದು ಟಿಎಂಸಿ ಯ ಸುದೀಪ್ ಬಂಡೋಪಾಧ್ಯಾಯ್ ಆರೋಪಿಸಿದ್ದಾರೆ.
ಪಾಟ್ನಾದಿಂದ ಹೊರಟ ವಿಮಾನ ಕೊಲ್ಕೋತಾ ವಿಮಾನ ನಿಲ್ದಾಣದ ಸುತ್ತಾಡಿದ ಬಳಿಕ ಕೆಳಗಿಳಿಯಿತು. ತಾಂತ್ರಿಕ ಕಾರಣಗಳಿಂದಾಗಿ ಹೀಗಾಗಿದೆ, ಇಂಥಹ ಘಟನೆಗಳು ಹೊಸತೇನಲ್ಲ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


