ದೇಶ

ತಮಿಳುನಾಡು: ಸ್ಫೋಟಕ ತಯಾರಿಕಾ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ; 10 ಸಾವು

ತಮಿಳುನಾಡಿನ ಮದ್ದು ಗುಂಡು ಮತ್ತು ಸ್ಫೋಟಕ ತಯಾರಿಕಾ ಕಾರ್ಖಾನೆಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, 10 ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಗುರುವಾರ ನಡೆದಿದೆ...

ತಮಿಳುನಾಡು: ಸ್ಫೋಟಕ ತಯಾರಿಕಾ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ; 10 ಸಾವು
ತಮಿಳುನಾಡು: ಸ್ಫೋಟಕ ಫ್ಯಾಕ್ಟರಿಯಲ್ಲಿ ಭಾರೀ ಅಗ್ನಿ ಅವಘಡ - 10 ಜನರು ಸಾವು
Published On :

ತಿರುಚಿ: ತಮಿಳುನಾಡಿನ ಮದ್ದು ಗುಂಡು ಮತ್ತು ಸ್ಫೋಟಕ ತಯಾರಿಕಾ ಕಾರ್ಖಾನೆಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, 10 ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಗುರುವಾರ ನಡೆದಿದೆ.

ತಿರುಚನಾಪಲ್ಲಿಯ ತುರೈಯೂರ್ ನಲ್ಲಿರುವ ಮುರುಂಗಪಟ್ಟಿ ಗ್ರಾಮದಲ್ಲಿರುವ ಸ್ಫೋಟಕ ತಯಾರಿಕಾ ಕಾರ್ಖಾನೆಯಲ್ಲಿ ಇಂದು ಬೆಳಿಗ್ಗೆ 7.25ರ ಸುಮಾರಿಗೆ ಸ್ಫೋಟ ಸಂಭವಿಸಿದೆ. ಪರಿಣಾಮ ಕಾರ್ಖಾನೆಯಲ್ಲಿ ಬೆಳಗಿನ ಪಾಳಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ 10 ಸಜೀವ ದಹನವಾಗಿದ್ದು, 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.

6 ಗಂಟೆಯಿಂದ ಕಾರ್ಖಾನೆಯಲ್ಲಿ ಕೆಲಸ ಆರಂಭವಾಗುತ್ತದೆ. ಕಾರ್ಮಿಕರು ಕೆಲಸ ಆರಂಭಿಸಿದ ಕೇವಲದ ಅರ್ಧ ಗಂಟೆಯಲ್ಲಿ ಮಹಡಿಯೊಂದರಲ್ಲಿ ಭಾರೀ ಪ್ರಮಾಣದಲ್ಲಿ ಸ್ಫೋಟ ಸಂಭವಿಸಿದ ಶಬ್ಧ ಕೇಳಿಬಂದಿದೆ. ಶಬ್ಧ ಕೇಳಿದ ಕೂಡಲೇ ಗ್ರಾಮಸ್ಥರು ಸ್ಥಳಕ್ಕೆ ಓಡಿ ಬಂದಿದ್ದಾರೆ. ಕೂಡಲೇ ಅಗ್ನಿ ಶಾಮಕ ದಳ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

10ಕ್ಕೂ ಹೆಚ್ಚು ಅಗ್ನಿ ಶಾಮಕ ದಳದ ವಾಹನಗಳು ಸ್ಥಳಕ್ಕಾಗಮಿಸಿ ಬೆಂಕಿ ನಂದಿಸುವ ಕಾರ್ಯಾಚರಣೆಯನ್ನು ನಡೆಸುತ್ತಿದೆ. ಬೆಂಕಿ ನಂದಿಸಲು ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದು, ಮೃತ ದೇಹಗಳನ್ನು ತಿರುಚಿಯ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.