ದೇಶ

ರಾಜ್ ಘಾಟ್'ಗೆ ಭೇಟಿ: ರಾಷ್ಟ್ರಪಿತ ಬಾಪೂಗೆ ನಮನ ಸಲ್ಲಿಸಿದ ಮೋದಿ, ಪ್ರಣಬ್

ರಾಷ್ಟ್ರಪಿತ ಗಾಂಧೀಜಿಯವರ 147ನೇ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ರಾಜ್ ಘಾಟ್ ಗೆ ಭೇಟಿ ನೀಡಿದ್ದು, ಬಾಪೂ ಅವರ...

ರಾಜ್ ಘಾಟ್'ಗೆ ಭೇಟಿ: ರಾಷ್ಟ್ರಪಿತ ಬಾಪೂಗೆ ನಮನ ಸಲ್ಲಿಸಿದ ಮೋದಿ, ಪ್ರಣಬ್
ರಾಜ್ ಘಾಟ್'ಗೆ ಭೇಟಿ: ರಾಷ್ಟ್ರಪಿತ ಗಾಂಧೀಜಿಗೆ ನಮನ ಸಲ್ಲಿಸಿದ ಮೋದಿ, ಪ್ರಣಬ್
Published On :

ನವದೆಹಲಿ: ರಾಷ್ಟ್ರಪಿತ ಗಾಂಧೀಜಿಯವರ 147ನೇ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ರಾಜ್ ಘಾಟ್ ಗೆ ಭೇಟಿ ನೀಡಿದ್ದು, ಬಾಪೂ ಅವರ ಸ್ಮಾರಕಕ್ಕೆ  ಪುಷ್ಪನಮನ ಸಲ್ಲಿಸಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರೊಂದಿಗೆ ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಮತ್ತು ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್,  ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಎಲ್.ಕೆ. ಅಡ್ವಾಣಿ, ಉಪ ರಾಷ್ಟ್ರಪತಿ ಹಮೀದ್ ಅನ್ಸಾರಿ ಅವರು ಗಾಂಧೀಜಿಯವರ ಸ್ಮಾರಕಕ್ಕೆ ಪುಷ್ಪನಮನವನ್ನು ಸಲ್ಲಿಸಿದರು.

ಇಂದು ದೇಶದ ಎರಡನೇ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿಯವರ ಹುಟ್ಟುಹಬ್ಬವಾಗಿದ್ದು, ಲಾಲ್ ಬಹದ್ದೂರ್ ಶಾಸ್ತ್ರಿಯವರ ಸ್ಮಾರಕಕ್ಕೂ ಪ್ರಧಾನಿ ಮೋದಿಯವರು ಪುಷ್ಪನಮವನ್ನು ಸಲ್ಲಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.