ದೇಶ

ಮಧ್ಯ ಪ್ರದೇಶದಲ್ಲಿ ನದಿಗೆ ಉರುಳಿದ ಬಸ್: 9 ಸಾವು, ಹಲವರು ಗಂಭೀರ

ಚಾಲಕನ ನಿಯಂತ್ರಣ ತಪ್ಪಿದ ಬಸ್ ಒಂದು ನದಿಗೆ ಉರುಳಿದ ಪರಿಣಾಮ 9 ಪ್ರಯಾಣಿಕರು ಸಾವನ್ನಪ್ಪಿ, ಹಲವರು ಗಾಯಗೊಂಡಿರುವ ಘಟನೆ ಭಾನುವಾರ ಮಧ್ಯಪ್ರದೇಶದಲ್ಲಿ ನಡೆದಿದೆ.

ಮಧ್ಯ ಪ್ರದೇಶದಲ್ಲಿ ನದಿಗೆ ಉರುಳಿದ ಬಸ್: 9 ಸಾವು, ಹಲವರು ಗಂಭೀರ
ಸಾಂದರ್ಭಿಕ ಚಿತ್ರ
Published On :

ಭೋಪಾಲ್: ಚಾಲಕನ ನಿಯಂತ್ರಣ ತಪ್ಪಿದ ಬಸ್ ಒಂದು ನದಿಗೆ ಉರುಳಿದ ಪರಿಣಾಮ 9 ಪ್ರಯಾಣಿಕರು ಸಾವನ್ನಪ್ಪಿ, ಹಲವರು ಗಾಯಗೊಂಡಿರುವ ಘಟನೆ ಭಾನುವಾರ ಮಧ್ಯಪ್ರದೇಶದಲ್ಲಿ  ನಡೆದಿದೆ.

ಮಧ್ಯಪ್ರದೇಶದ ವಿದಿಶಾ ಜಿಲ್ಲೆಯ ಸಪನ್ ನದಿಯಲ್ಲಿ ಈ ದುರಂತ ಸಂಭವಿಸಿದ್ದು, ಸುಮಾರು 24 ಮಂದಿ ಪ್ರಯಾಣಿಕರನ್ನು ಹೊತ್ತೊಯುತ್ತಿದ್ದ ಬಸ್ ನದಿಗೆ ಉರುಳಿದೆ ಎಂದು ತಿಳಿದುಬಂದಿದೆ.  ಪರಿಣಾಮ ಸುಮಾರು 9 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದು, ಈ ವರೆಗೂ 9 ಮೃತದೇಹಗಳನ್ನು ಹೊರತೆಗೆದಿದ್ದಾರೆ.

ಬಸ್ ನಲ್ಲಿದ್ದ ಹಲವು ಪ್ರಯಾಣಿಕರು ನಾಪತ್ತೆಯಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಶಂಕೆ ಎದುರಾಗಿದೆ. ಪ್ರಸ್ತುತ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ  ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.