ಪ್ರಧಾನಿ ಮೋದಿಗೆ ಬೆದರಿಕೆ: ಬಲೂನ್'ನಲ್ಲಿ ಬೆದರಿಕೆ ಸಂದೇಶ ಕಳುಹಿಸಿದ ಪಾಕ್
ಭಾರತೀಯ ಸೇನೆಗೆ ಸೀಮಿತ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲು ಸತತ ಯತ್ನ ನಡೆಸುತ್ತಿರುವ ಪಾಕಿಸ್ತಾನ, ಬಲೂನ್ ಮೂಲಕ ಇದೀಗ ಬೆದರಿಕೆ ಸಂದೇಶವೊಂದನ್ನು ರವಾನಿಸಿದೆ...

ಗುರುದಾಸ್ಪುರ: ಭಾರತೀಯ ಸೇನೆಗೆ ಸೀಮಿತ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲು ಸತತ ಯತ್ನ ನಡೆಸುತ್ತಿರುವ ಪಾಕಿಸ್ತಾನ, ಬಲೂನ್ ಮೂಲಕ ಇದೀಗ ಬೆದರಿಕೆ ಸಂದೇಶವೊಂದನ್ನು ರವಾನಿಸಿದೆ.
ಉರ್ದು ಭಾಷೆಯಲ್ಲಿ ಸಂದೇಶ ಬರೆದಿರುವ ಬಲೂನ್ ಗಳು ದೀನಾನಗರದಲ್ಲಿ ದೊರಕಿದ್ದು, ಪ್ರಧಾನಿ ಮೋದಿಯವರಿಗೆ ಬೆದರಿಕೆಯೊಡ್ಡಲಾಗಿದೆ ಎಂದು ತಿಳಿದುಬಂದಿದೆ.
ಬೆದರಿಕೆ ಸಂದೇಶ ಬರೆದಿರುವ ಎರಡು ಬಲೂನ್ ಗಳು ದೊರಕಿದ್ದು, ಒಂದು ಬಲೂನ್ ಮೇಲೆ ಪಾಕಿಸ್ತಾನ ಸೇನಾ ಬಲವನ್ನು ಪರಿಶೀಲಿಸಲು ನಿಮಗೆಷ್ಟು ಧೈರ್ಯ...ಭಾರತೀಯ ಸೇನೆ ನಡೆಸಿದ ಸೀಮಿತ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಿಯೇ ತೀರುತ್ತೇವೆಂದು ಬರೆದಿದೆ, ಮತ್ತೊಂದು ಬಲೂನ್ ಮೇಲೆ ಪ್ರಧಾನಿ ಮೋದಿಯವರಿಗೆ ಬೆದರಿಕೆಯೊಡ್ಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಮೋದಿ ಸುನ್ ಲೇ...ಅಯೂಬಿ ಕಿ ತಲ್ವಾರ್ ಅಭಿ ಹಮಾರೆ ಪಾಸ್ ಹೈ..ಇಸ್ಲಾಂ ಜಿಂದಾಬಾದ್ ಎಂದು ಬರೆಯಲಾಗಿದೆ.
ಬಲೂನ್ ಗಳು ಶುಕ್ರವಾರ ಸಂಜೆ ಸುಮಾರಿಗೆ ಸ್ಥಳೀಯರ ಕೈಗೆ ಸಿಕ್ಕಿದ್ದು, ಕೂಡಲೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದರಂತೆ ಸ್ಥಳಕ್ಕೆ ಬಂದ ಪೊಲೀಸರು ಬಲೂನ್ ಗಳನ್ನು ವಶಕ್ಕೆ ಪಡೆದು ತಪಾಸಣೆ ನಡೆಸಿದ್ದಾರೆ.
ಬೆದರಿಕೆ ಹಿನ್ನೆಲೆಯಲ್ಲಿ ಪಂಜಾಬ್ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ಅವರು ಗಡಿಯಲ್ಲಿರುವ ಗುರುದಾಸ್ಪುರ, ಪಠಾಣ್ ಕೋಟ್ ಜಿಲ್ಲೆಗಳಿಗೆ ಭೇಟಿ ನೀಡಿ ಭದ್ರತಾ ವ್ಯವಸ್ಥೆಗಳನ್ನು ಪರಿಶೀಲನೆ ನಡೆಸಿದ್ದಾರೆಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


