ಲಾಲ್ ಬಹದ್ದೂರ್ ಶಾಸ್ತ್ರಿ, ಗಾಂಧಿ ಜಯಂತಿ ಇಂದು: ಶುಭಾಶಯ ಕೋರಿದ ಪ್ರಧಾನಿ ಮೋದಿ
ರಾಷ್ಟ್ರಪಿತ ಗಾಂಧೀಜಿ ಹಾಗೂ ದೇಶದ ಎರಡನೇ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನಾಚರಣೆಯನ್ನು ದೇಶದಾದ್ಯಂತ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶದ...

ನವದೆಹಲಿ: ರಾಷ್ಟ್ರಪಿತ ಗಾಂಧೀಜಿ ಹಾಗೂ ದೇಶದ ಎರಡನೇ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನಾಚರಣೆಯನ್ನು ದೇಶದಾದ್ಯಂತ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶದ ಜನತೆಗೆ ಭಾನುವಾರ ಶುಭಾಶಯ ಕೋರಿದ್ದಾರೆ.
ಈ ಕುರಿತಂತೆ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಗಾಂಧೀಜಿಯವರು ವಿಶ್ವದಲ್ಲಿಯೇ ಭಾರತವನ್ನು ಶ್ರೇಷ್ಟ ದೇಶವನ್ನಾಗಿ ಮಾಡಿದ್ದಾರೆ. ಅವರ ಆದರ್ಶಗಳು, ಬಡಜನರಿಗಾಗಿ ಅವರಲ್ಲಿದ್ದ ಸಮರ್ಪಣೆ ಹಾಗೂ ನ್ಯಾಯಕ್ಕಾಗಿ ಅವರು ಪಟ್ಟ ಪರಿಶ್ರಮ ಪ್ರತೀಯೊಬ್ಬರಿಗೂ ಪ್ರೇರಣೆಯಾಗಿದೆ. ಪೂಜ್ಯ ಬಾಪೂಜಿಯವರಿಗೆ ಶತಕೋಟಿ ನಮನ ಎಂದು ಹೇಳಿದ್ದಾರೆ.
ದೇಶದಾದ್ಯಂತ ಇಂದು ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಕದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಶಾಸ್ತ್ರಿಯವರ ಜನ್ಮದಿನಕ್ಕೆ ನಮನವನ್ನು ಸಲ್ಲಿಸುತ್ತಿದ್ದೇನೆಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


