ದೇಶ

ಮತ್ತೆ ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನ

ಪಾಕಿಸ್ತಾನ ಮತ್ತೆ ಕದನ ವಿರಾಮವನ್ನು ಉಲ್ಲಂಘಿಸಿದ್ದು, ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿಯಲ್ಲಿ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿರುವುದಾಗಿ ಸೋಮವಾರ...

ಮತ್ತೆ ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನ
ಸಂಗ್ರಹ ಚಿತ್ರ
Published On :

ಜಮ್ಮು: ಪಾಕಿಸ್ತಾನ ಮತ್ತೆ ಕದನ ವಿರಾಮವನ್ನು ಉಲ್ಲಂಘಿಸಿದ್ದು, ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿಯಲ್ಲಿ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿರುವುದಾಗಿ ಸೋಮವಾರ ತಿಳಿದುಬಂದಿದೆ.

ಪೂಂಚ್ ಜಿಲ್ಲೆಯ ಶಾಹ್ಪುರ್ ಸೆಕ್ಟರ್ ನಲ್ಲಿ ಭಾರೀ ಪ್ರಮಾಣದಲ್ಲಿ ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

ಕಳೆದ 16 ಗಂಟೆಗಳಲ್ಲಿ ಪಾಕಿಸ್ತಾನ 3 ಬಾರಿ ಕದನ ವಿರಾಮವನ್ನು ಉಲ್ಲಂಘನೆ ಮಾಡಿದ್ದು, ಭಾರತೀಯ ಸೇನೆ ನಡೆಸಿದ ಸೀಮಿತ ದಾಳಿಯ ಬಳಿ ಪಾಕಿಸ್ತಾನ ಒಟ್ಟಾರೆ 8 ಬಾರಿ ಕದನ ವಿರಾಮವನ್ನು ಉಲ್ಲಂಘನೆ ಮಾಡಿದೆ.

ಸೀಮಿತ ದಾಳಿ ಬಳಿಕ ಭಾರತದ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳಲು ಪಾಕಿಸ್ತಾನ ಸತತ ಯತ್ನ ನಡೆಸುತ್ತಿದ್ದು, ಗಡಿ ನುಸುಳಲು ಹಲವು ಪ್ರಯತ್ನಗಳನ್ನು ನಡೆಸುತ್ತಿದೆ. ಪೂಂಚ್ ಸೆಕ್ಟರ್ ನಲ್ಲಿ ಒಂದೆಡೆ ಸೇನೆಯ ಮೇಲೆ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದ್ದರೆ, ಮತ್ತೊಂದೆಡೆ ಜಮ್ಮು ಮತ್ತು ಕಾಶ್ಮೀರದ ಪಲ್ಲಾನ್ವಾಲಾ ಒಲ್ಒಸಿಯಲ್ಲಿಯೂ ಸೇನೆಯ ಮೇಲೆ ಶೆಲ್ ದಾಳಿಗಳನ್ನು ನಡೆಸಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.