ಬಾರಾಮುಲ್ಲಾ ದಾಳಿ: ಪ್ರಧಾನಿ ಮೋದಿಗೆ ವರದಿ ಸಲ್ಲಿಸಿದ ಅಜಿತ್ ದೋವಲ್
ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಸೇನಾ ಶಿಬಿರದ ಮೇಲೆ ಉಗ್ರರು ನಡೆಸಿದ ದಾಳಿ ಪ್ರಕರಣ ಕುರಿತಂತೆ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ...

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಸೇನಾ ಶಿಬಿರದ ಮೇಲೆ ಉಗ್ರರು ನಡೆಸಿದ ದಾಳಿ ಘಟನೆಗೆ ಸಂಬಂಧಿಸಿದಂತೆ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಸೋಮವಾರ ವರದಿ ಸಲ್ಲಿಸಿದ್ದಾರೆಂದು ತಿಳಿದುಬಂದಿದೆ.
ಭದ್ರತೆಯ ಕುರಿತಂತೆ ಹಾಗೂ ಪೂರ್ವ ಸಿದ್ಧತೆಗಳ ಕುರಿತಂತೆ ದೋವಲ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ವರದಿ ಸಲ್ಲಿಸಿದ್ದು, ಮುಂದಿನ ಹೆಜ್ಜೆ ಹಾಗೂ ನಿರ್ಧಾರಗಳ ಕುರಿತಂತೆ ಮಾತುಕತೆ ನಡೆಸಿದ್ದಾರೆಂದು ಹೇಳಲಾಗುತ್ತಿದೆ.
ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು ಅವರು ದಾಳಿ ಕುರಿತಂತೆ ಮಾತನಾಡಿದ್ದು, ಉಗ್ರರು ದಾಳಿ ನಡೆಸಿದ ಸಂದರ್ಭದಲ್ಲಿ ಪರಿಸ್ಥಿತಿಯನ್ನು ಹೇಗೆ ನಿಭಾಯಿಸಬೇಕೆಂದು ನಮ್ಮ ಯೋಧರಿಗೆ ತಿಳಿದಿದೆ ಎಂದು ಹೇಳಿದ್ದಾರೆ.
ರಾಜನಾಥ್ ಸಿಂಗ್ ಅವರು ಮಾತನಾಡಿ, ನಮ್ಮ ಸೇನೆಯ ಮೇಲೆ ಸಂಪೂರ್ಣವಾಗಿ ನಂಬಿಕೆಯಿದ್ದು, ಉಗ್ರರ ದಾಳಿಗೆ ದಿಟ್ಟ ಉತ್ತರವನ್ನು ನೀಡಲಿದ್ದಾರೆಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


