ಪಿಒಕೆಯಲ್ಲಿ ಎಲ್ಲಾ ರೀತಿಯಲ್ಲೂ ಪಾಕ್ ಮಾನವ ಹಕ್ಕು ಉಲ್ಲಂಘನೆ ಮಾಡುತ್ತಿದೆ: ಬಿಜೆಪಿ
ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಇಸ್ಲಾಮಾಬಾದ್ ಎಲ್ಲಾ ರೀತಿಯಲ್ಲಿಯೂ ಮಾನವ ಹಕ್ಕು ಉಲ್ಲಂಘನೆ ಮಾಡುತ್ತಿದೆ ಎಂದು ಬಿಜೆಪಿ ಸೋಮವಾರ ಹೇಳಿಕೊಂಡಿದೆ...

ನವದೆಹಲಿ: ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಇಸ್ಲಾಮಾಬಾದ್ ಎಲ್ಲಾ ರೀತಿಯಲ್ಲಿಯೂ ಮಾನವ ಹಕ್ಕು ಉಲ್ಲಂಘನೆ ಮಾಡುತ್ತಿದೆ ಎಂದು ಬಿಜೆಪಿ ಸೋಮವಾರ ಹೇಳಿಕೊಂಡಿದೆ.
ಈ ಕುರಿತಂತೆ ಮಾತನಾಡಿರುವ ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಅವರು, ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಪಾಕಿಸ್ತಾನ ಯಾವ ರೀತಿಯಲ್ಲಿ ದೌರ್ಜನ್ಯವೆಸಗುತ್ತಿದೆ ಎಂಬುದನ್ನು ಸ್ವತಃ ಬಲೂಚಿಸ್ತಾನದಲ್ಲಿರುವ ಜನರೇ ಬಹಿರಂಗ ಪಡಿಸುತ್ತಿದ್ದಾರೆ. ಬಲೂಚಿಸ್ತಾನದಲ್ಲಿ ಪಾಕಿಸ್ತಾನ ನಡೆಸಿದ ನರಮೇಧ ಕೃತ್ಯ ಎಲ್ಲರಿಗೂ ತಿಳಿದಿರುವ ವಿಚಾರ. ಪಾಕಿಸ್ತಾನ ಎಲ್ಲಾ ರೀತಿಯಲ್ಲಿಯೂ ಮಾನವ ಹಕ್ಕನ್ನು ಉಲ್ಲಂಘನೆ ಮಾಡುತ್ತಿದೆ ಎಂಬುದಕ್ಕೆ ಬಲೂಚಿಸ್ತಾನದಲ್ಲಿ ನಡೆಸುತ್ತಿರುವ ಪ್ರತಿಭಟನೆಗಳೇ ಸಾಕ್ಷಿಯಾಗಿದೆ ಎಂದು ಹೇಳಿದ್ದಾರೆ.
ಒಂದು ದೇಶವನ್ನು ಪ್ರತಿನಿಧಿಸುವ ವ್ಯಕ್ತಿ ಹಾಗೂ ಸ್ವತಃ ಪಾಕಿಸ್ತಾನದ ಪ್ರಧಾನಿ ನವಾಜ್ ಶರೀಫ್ ಅವರೇ ಉಗ್ರ ಬುರ್ಹಾನ್ ವಾನಿಯನ್ನು ಹೀರೋ ಎಂದು ಪ್ರಶಂಸಿಸಿದ್ದಾರೆ. ಪಾಕಿಸ್ತಾನದಲ್ಲಿ ಉಗ್ರ ಚಟುವಟಿಕೆಗಳಿಗೆ ಅಲ್ಲಿನ ನಾಯಕರೇ ಬೆಂಬಲಗಳನ್ನು ನೀಡುತ್ತಿದ್ದಾರೆಂದು ಇದರಿಂದಲೇ ಜಗತ್ತಿಗೆ ತಿಳಿಸಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


