ಮತ್ತೆ ಕದನ ವಿರಾಮ ಉಲ್ಲಂಘಿಸಿದ ಪಾಕ್: ಗಡಿಯಲ್ಲಿ ಸೇನಾ ನೆಲೆಗಳ ಮೇಲೆ ಶೆಲ್ ದಾಳಿ
ಪಾಕಿಸ್ತಾನ ಮತ್ತೆ ಕದನ ವಿರಾಮವನ್ನು ಉಲ್ಲಂಘನೆ ಮಾಡಿದ್ದು, ರಜೌರಿ ಜಿಲ್ಲೆಯ ನೌಷಾರ್ ಸೆಕ್ಟರ್ ನ ಸೇನಾ ನೆಲೆಗಳನ್ನು ಗುರಿಯಾಗಿಸಿಕೊಂಡಿರುವ ಪಾಕಿಸ್ತಾನ ಸೇನೆ ಅಪ್ರಚೋದಿನ ಗುಂಡಿನ ದಾಳಿ ನಡೆಸುತ್ತಿದೆ...

ಜಮ್ಮು: ಪಾಕಿಸ್ತಾನ ಮತ್ತೆ ಕದನ ವಿರಾಮವನ್ನು ಉಲ್ಲಂಘನೆ ಮಾಡಿದ್ದು, ರಜೌರಿ ಜಿಲ್ಲೆಯ ನೌಷಾರ್ ಸೆಕ್ಟರ್ ನ ಸೇನಾ ನೆಲೆಗಳನ್ನು ಗುರಿಯಾಗಿಸಿಕೊಂಡಿರುವ ಪಾಕಿಸ್ತಾನ ಸೇನೆ ಅಪ್ರಚೋದಿನ ಗುಂಡಿನ ದಾಳಿ ನಡೆಸುತ್ತಿದೆ ಎಂದು ಮಂಗಳವಾರ ತಿಳಿದುಬಂದಿದೆ.
ರಜೌರಿ ಜಿಲ್ಲೆಯ ನಾಗರಿಕ ವಸತಿ ಪ್ರದೇಶ ಸೇರಿದಂತೆ ಮೂರು ಕಡೆ ಬೆಳಗಿನ ಜಾವ 5.15ರ ಸುಮಾರಿಗೆ ಪಾಕಿಸ್ತಾನ ಸೇನೆ ಅಪ್ರಚೋದಿತ ದಾಳಿ ನಡೆಸುತ್ತಿದೆ ಎಂದು ರಕ್ಷಣಾ ಪಡೆಯ ವಕ್ತಾರ ಮನೀಷ್ ಮೆಹ್ತಾ ಅವರು ಹೇಳಿದ್ದಾರೆ.
ಗುಂಡಿನ ದಾಳಿ ಜೊತೆಜೊತೆಗೆ ಪಾಕಿಸ್ತಾನ ಸೇನೆ ಮೋರ್ಟಾನ್ ಬಾಂಬ್ ಗಳು ಹಾಗೂ ಶೆಲ್ ಗಳು, ಸ್ವಯಂಚಾಲಿತ ಬಂದೂಕುಗಳನ್ನು ಬಳಸಿಕೊಂಡು ದಾಳಿ ನಡೆಸುತ್ತಿದ್ದು, ಪಾಕ್ ಸೇನೆ ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರ ನೀಡುತ್ತಿದೆ ಎಂದು ಅವರು ತಿಳಿಸಿದ್ದಾರೆ.
24 ಗಂಟೆಗಳಲ್ಲಿ ಪಾಕಿಸ್ತಾನ ಸೇನೆ 5 ಬಾರಿ ಕದನ ವಿರಾಮವನ್ನು ಉಲ್ಲಂಘನೆ ಮಾಡಿದ್ದು, ನಿನ್ನೆ ನಾಲ್ಕು ಬಾರಿ ಕದನ ವಿರಾಮವನ್ನು ಉಲ್ಲಂಘನೆ ಮಾಡಿ ದಾಳಿ ನಡೆಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


