ಸೀಮಿತ ದಾಳಿ; ಪಾಕ್ ಮಾಧ್ಯಮದಲ್ಲಿ ನೀವೇ ಹೆಡ್ ಲೈನ್: ಕೇಜ್ರಿವಾಲ್ ವಿರುದ್ಧ ಬಿಜೆಪಿ ವಾಗ್ದಾಳಿ
ಕಳೆದ ವಾರ ಭಾರತೀಯ ಸೇನೆ ನಡೆಸಿದ ಸೀಮಿತ ದಾಳಿಗೆ ಸಂಬಂಧಿಸಿದಂತೆ ಭಾರತೀಯ ಜನತಾ ಪಕ್ಷ(ಬಿಜೆಪಿ) ಮಂಗಳವಾರ ದೆಹಲಿ...

Published On :
ನವದೆಹಲಿ: ಕಳೆದ ವಾರ ಭಾರತೀಯ ಸೇನೆ ನಡೆಸಿದ ಸಿಮೀತ ದಾಳಿಗೆ ಸಂಬಂಧಿಸಿದಂತೆ ಭಾರತೀಯ ಜನತಾ ಪಕ್ಷ(ಬಿಜೆಪಿ) ಮಂಗಳವಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ.
ಈ ಸಂಬಂಧ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಅವರು, ಅಂತಹ ವಿಷಯಗಳಲ್ಲಿ ಇಡೀ ದೇಶ ಮತ್ತು ಎಲ್ಲಾ ಪಕ್ಷಗಳ ನಾಯಕರು ಒಗ್ಗಟ್ಟಾಗಿರುವುದಾಗಿ ಹೇಳುತ್ತಿದ್ದಾರೆ. ಆದರೆ ಕೇಜ್ರಿವಾಲ್ ಅವರ ಹೇಳಿಕೆ ದುರದೃಷ್ಟಕರ ಮತ್ತು ನೋವಿನ ವಿಚಾರ ಎಂದಿದ್ದಾರೆ.
ಪಾಕಿಸ್ತಾನ ಮಾಧ್ಯಮಗಳು ಭಾರತದಿಂದ ಯಾವುದೇ ಸೀಮಿತ ದಾಳಿ ನಡೆದಿಲ್ಲ ಎಂದು ಹೇಳಲಾಗುತ್ತಿದ್ದು, ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಾಕ್ಷ್ಯಗಳನ್ನು ನೀಡಬೇಕು ಎಂದು ಕೇಜ್ರಿವಾಲ್ ಅವರು ಒತ್ತಾಯಿಸಿದ್ದಾರೆ. ಭಾರತ ಸರ್ಕಾರ ಅದಕ್ಕೆ ಸಾಕ್ಷ್ಯ ನೀಡುತ್ತದೆ. ಆದರೆ ಭಾರತೀಯ ಸೇನೆಯ ಸಾಮರ್ಥ್ಯದ ಬಗ್ಗೆ ನಿಮಗೆ ನಂಬಿಕೆ ಇಲ್ಲವೆ? ಎಂದು ರವಿಶಂಕರ್ ಪ್ರಸಾದ್ ಅವರು ಕೇಜ್ರಿವಾಲ್ ಅವರನ್ನು ಪ್ರಶ್ನಿಸಿದ್ದಾರೆ.
ಒಂದು ವೇಳೆ ಅವರಿಗೆ ಭಾರತೀಯ ಸೇನೆಯ ಸಾಮರ್ಥ್ಯದ ಬಗ್ಗೆ ನಂಬಿಕೆ ಇದ್ದರೆ ಪಾಕ್ ಮಾಧ್ಯಮದ ಸುಳ್ಳು ಸುದ್ದಿ ನಿಮ್ಮ ಮೇಲೆ ಹೇಗೆ ಪರಿಣಾಮ ಬೀರಿತು ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ 'ಕೇಜ್ರಿವಾಲ್ ಅವರೇ ನಿಮಗೆ ಗೊತ್ತಿಲ್ಲ, ಪಾಕಿಸ್ತಾನ ಮಾಧ್ಯಮದಲ್ಲಿ ಇಂದು ನೀವೇ ಹೆಡ್ ಲೈನ್ ಸುದ್ದಿ' ಎಂದು ಆಪ್ ನಾಯಕನಿಗೆ ಟಾಂಗ್ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


