ಕಾವೇರಿ ವಿವಾದ: ತಮಿಳುನಾಡಿನ ಅಗತ್ಯತೆ ಅರ್ಥಮಾಡಿಕೊಂಡಿದ್ದಕ್ಕೆ ಸುಪ್ರೀಂಗೆ ಧನ್ಯವಾದ- ಡಿಎಂಕೆ
ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ತಮಿಳುನಾಡು ಪರವಾಗಿ ಆದೇಶ ನೀಡಿದ ಸುಪ್ರೀಂಕೋರ್ಟ್ ಧನ್ಯವಾದಗಳು ಎಂದು ಡಿಎಂಕೆ ಪಕ್ಷದ ಬುಧವಾರ ಹೇಳಿಕೊಂಡಿದೆ...

ಚೆನ್ನೈ: ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ತಮಿಳುನಾಡು ಪರವಾಗಿ ಆದೇಶ ನೀಡಿದ ಸುಪ್ರೀಂಕೋರ್ಟ್ ಧನ್ಯವಾದಗಳು ಎಂದು ಡಿಎಂಕೆ ಪಕ್ಷದ ಬುಧವಾರ ಹೇಳಿಕೊಂಡಿದೆ.
ಈ ಕುರಿತಂತೆ ಮಾಡನಾರುವ ಡಿಎಂಕೆ ವಕ್ತಾರ ಟಿ.ಕೆ.ಎಸ್. ಎಲಾನ್ಗೊವನ್ ಅವರು, ತಮಿಳುನಾಡಿನ ಅಗತ್ಯತೆಗಳನ್ನು ಅರ್ಥ ಮಾಡಿಕೊಂಡು ಸುಪ್ರೀಂಕೋರ್ಟ್ ನ್ಯಾಯಯುತ ಆದೇಶವನ್ನು ನೀಡಿದೆ. ಸುಪ್ರೀಂ ಆದೇಶ ನಮಗೆ ಸಂತಸ ತಂದಿದೆ. ನ್ಯಾಯಾಲಯಕ್ಕೆ ಈ ಮೂಲಕ ಧನ್ಯವಾದ ಹೇಳಲು ಇಚ್ಛಿಸುತ್ತೇವೆಂದು ಹೇಳಿದ್ದಾರೆ.
ಕಾವೇರಿ ವಿವಾದ ಸಂಬಂಧ ನಿನ್ನೆಯಷ್ಟೇ ಆದೇಶ ಹೊರಡಿಸಿದ್ದ ಸುಪ್ರೀಂಕೋರ್ಟ್ ಅ.7ರಿಂದ 18ರವರೆಗೆ ನಿತ್ಯ 2 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿತ್ತು. ಅಲ್ಲದೆ ಸೆ.20ರ ಹಾಗೂ ಸೆ.30ರಂದಿನ ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆ ಆದೇಶಕ್ಕೆ ತಡೆ ನೀಡಿ ವಿಚಾರಣೆಯನ್ನು ಅ.18ಕ್ಕೆ ಮುಂಡೂಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


