ದೇಶ

ಡೆಂಗ್ಯೂ, ಚಿಕುನ್ ಗುನ್ಯಾ ವರದಿ ಸಲ್ಲಿಸಲು ವಿಳಂಬ: ದೆಹಲಿ ಸರ್ಕಾರಕ್ಕೆ ದಂಡ ವಿಧಿಸಿದ ಸುಪ್ರೀಂ

ಡೆಂಗ್ಯೂ ಮತ್ತು ಚಿಕುನ್ ಗುನ್ಯಾ ರೋಗಿಗಳ ಬಗ್ಗೆ ವರದಿ ಸಲ್ಲಿಸಲು ವಿಳಂಬ ಮಾಡಿದ ಹಿನ್ನೆಲೆಯಲ್ಲಿ ದೆಹಲಿ ಸರ್ಕಾರದ ವಿರುದ್ಧ ಹರಿಹಾಯ್ದಿರುವ ಸುಪ್ರೀಂ....

ಡೆಂಗ್ಯೂ, ಚಿಕುನ್ ಗುನ್ಯಾ ವರದಿ ಸಲ್ಲಿಸಲು ವಿಳಂಬ: ದೆಹಲಿ ಸರ್ಕಾರಕ್ಕೆ ದಂಡ ವಿಧಿಸಿದ ಸುಪ್ರೀಂ
ಕೇಜ್ರಿವಾಲ್
Published On :

ನವದೆಹಲಿ: ಡೆಂಗ್ಯೂ ಮತ್ತು ಚಿಕುನ್ ಗುನ್ಯಾ ರೋಗಿಗಳ ಬಗ್ಗೆ ವರದಿ ಸಲ್ಲಿಸಲು ವಿಳಂಬ ಮಾಡಿದ ಹಿನ್ನೆಲೆಯಲ್ಲಿ ದೆಹಲಿ ಸರ್ಕಾರದ ವಿರುದ್ಧ ಹರಿಹಾಯ್ದಿರುವ ಸುಪ್ರೀಂ ಕೋರ್ಟ್ 25 ಸಾವಿರ ರು. ದಂಡ ವಿಧಿಸಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಾರಕ ರೋಗಗಳಾದ ಚಿಕುನ್ ಗುನ್ಯಾ ಮತ್ತು ಡೆಂಗ್ಯೂ ರೋಗಿಗಳ ಬಗ್ಗೆ ವರದಿ ನೀಡುವಂತೆ ಕೇಳಿತ್ತು. ಜೊತೆಗೆ ಹೊಣೆಗಾರಿಕೆಯಿಂದ ನೀವು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದ ಸುಪ್ರೀಂ ಕೋರ್ಟ್, ಆದೇಶವನ್ನು ಪಾಲಿಸದ ಅಧಿಕಾರಿಗಳ ವಿವರ ಸಲ್ಲಿಸುವಂತೆಯೂ ಹೇಳಿತ್ತು, ಆದರೆ ಸುಪ್ರೀಂ ಕೋರ್ಟ್ ಆದೇಶವನ್ನು ಪಾಲಿಸದ ಹಿನ್ನೆಲೆಯಲ್ಲಿ ದೆಹಲಿಯ ಆಪ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತಪರಾಕಿ ಹಾಕಿದೆ.

ಯಾವ ಅಧಿಕಾರಿಗಳು ಆದೇಶವನ್ನು ಪಾಲಿಸುತ್ತಿಲ್ಲ ಎಂಬುದಾಗಿ ಪ್ರಮಾಣ ಪತ್ರ ಸಲ್ಲಿಸಬೇಕೆಂದು ನ್ಯಾಯಮೂರ್ತಿ  ಮದನ್ ಬಿ ಲೋಕೂರ್ ನೇತೃತ್ವದ ಪೀಠ ಆರೋಗ್ಯ ಸಚಿವ ಸತ್ಯೇಂದ್ರ ಜೈನ್  ಅವರಿಗೆ ಆದೇಶಿಸಿತ್ತು.

ಅಧಿಕಾರಿಗಳು ಈ ಮಾರಕ ರೋಗಗಳ ಬಗ್ಗೆ ಸರಿಯಾದ ಮಾಹಿತಿ ನೀಡುತ್ತಿಲ್ಲ, ಎಲ್ಲಾ ಮಾಹಿತಿಗಳನ್ನು ಲೆಪ್ಟಿನೆಂಟ್ ಗವರ್ನರ್  ನಜೀಬ್ ಜಂಗ್ ಅವರಿಗೆ ನೀಡುತ್ತಿದ್ದಾರೆ ಎಂದು ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಆರೋಪಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.